https://youtube.com/shorts/9OUTrzsAEaE?si=-GbS-QxOxuzBuJvH
newsics.com
ಹಸೆಮಣೆ ಏರಬೇಕಿದ್ದ ಯುವಕ , ಪಲ್ಲಕ್ಕಿ ಹೊತ್ತ ಟ್ರ್ಯಾಕ್ಟರ್ ಹರಿದು ಮೃತಪಟ್ಟಿರುವ ಘಟನೆ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವದಲ್ಲಿ ನಡೆದಿದೆ.
ಮದುವೆ ಆಹ್ವಾನ ಪತ್ರಿಕೆ ನೀಡಲು ಬಂದಿದ್ದ ಈತ, ದೇವಾಲಯದ ಬ್ರಹ್ಮರಥೋತ್ಸವ ನಿನ್ನೆ ನಡೆದಿದ್ದು, ರಥೋತ್ಸವ ಹಿನ್ನಲೆ ರಾತ್ರಿ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪಲ್ಲಕ್ಕಿಗಳನ್ನ ನೋಡುತ್ತಾ ನಿಂತಿದ್ದ ಯುವಕನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಅಕ್ಷತ್ (27) ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗಿತ್ತಾದರೂ ಮಾರ್ಗ ಮಧ್ಯೆಯೇ ಉಸಿರು ಚೆಲ್ಲಿದ್ದಾರೆ.
ಬನಶಂಕರಿ ನಿವಾಸಿಯಾಗಿರುವ ಅಕ್ಷತ್, ಸಂಬಂಧಿಕರಿಗೆ ಹಾಗೂ ಸ್ನೇಹಿತರಿಗೆ ಮದುವೆಯ ಅಹ್ವಾನ ಪತ್ರಿಕೆ ವಿತರಿಸಲೆಂದು ಬಂದಿದ್ದರು. ಹಾಗೆ ಜಾತ್ರೆಯನ್ನೂ ನೋಡಿ ಹೋಗೊಣ ಎಂದು ಅಲ್ಲಿಯೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಇನ್ನು ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದಲೇ ಅಪಘಾತ ನಡೆದಿದೆ ಎನ್ನಲಾಗಿದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಳಿಮಾವು ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು, ಸ್ಥಳಕ್ಕೆ ಬೆಂಗಳೂರು ದಕ್ಷಿಣ ಸಂಚಾರ ಡಿಸಿಪಿ ಗೋಪಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://www.newsics.com/2026/04/09/one-and-a-half-year-old-child-falls-from-3rd-floor-while-playing/