https://youtube.com/shorts/9OUTrzsAEaE?si=-GbS-QxOxuzBuJvH
newsics.com
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಹೊರಬಿದ್ದಿದೆ. ಆನ್ಲೈನ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಬಳಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಏಪ್ರಿಲ್ 09) ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ದಾಖಲೆ ಮಟ್ಟದಲ್ಲಿ ಪಿಯುಸಿ ಫಲಿತಾಂಶ ಏರಿಕೆ ಕಂಡಿದೆ. ಪ್ರಸಕ್ತ ಸಾಲಿನಲ್ಲಿ ಈ ವರ್ಷ ಶೇ. 86 ರಷ್ಟು ಫಲಿತಾಂಶದ ದಾಖಲಾಗಿದ್ದು, ಕಳೆದ ವರ್ಷ 73.45 ರಷ್ಟು ಫಲಿತಾಂಶ ದಾಖಲಾಗಿತ್ತು. ಈ ವರ್ಷ ಶೇಕಡ 12.55ಕ್ಕಿಂತ ಹೆಚ್ಚು ಫಲಿತಾಂಶ ದಾಖಲು ಆಗಿದೆ.
ಅಲ್ಲದೆ ಪರೀಕ್ಷೆಗೆ ಹಾಜರಾದವರ ವಿದ್ಯಾರ್ಥಿಗಳ ಪೈಕಿ ಶೇಕಡ 86 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. ಪಿಯುಸಿ ಪರೀಕ್ಷೆಗೆ ಒಟ್ಟು 7, 10,363 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ನೋಂದಣಿ ಆದವರ ಪೈಕಿ 6,10,000 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ದಾಖಲೆಯ ಮಟ್ಟದಲ್ಲಿ ಪಿಯುಸಿ ಫಲಿತಾಂಶದಲ್ಲಿ ಏರಿಕೆ ಆಗಿದೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ ಒಟ್ಟು 1217 ಕೇಂದ್ರಗಳಲ್ಲಿ ನಡೆದಿದ್ದು, 5174 ಕಾಲೇಜುಗಳ ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ ಸೈನ್ಸ್ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.