https://youtube.com/shorts/9OUTrzsAEaE?si=-GbS-QxOxuzBuJvH
newsics.com
2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಧ್ಯಾಹ್ನ 3ಕ್ಕೆ ಪ್ರಕಟವಾಗಿದೆ. ವಿದ್ಯಾರ್ಥಿಗಳು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ಪರಿಶೀಲಿಸಬಹುದು. ಇನ್ನು, ಪ್ರತಿ ವರ್ಷದಂತೆ ಈ ವರ್ಷವೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.
2025–26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ–1 ಫೆ.28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.
https://www.newsics.com/2026/04/09/second-puc-results-announced-this-time-86-students-passed/