Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಪತ್ತೆಯಾದ ಕೇರಳ ಬಾಲಕಿ ಕೇಸಿಗೆ ಟ್ವಿಸ್ಟ್;  ಬಾಲಕಿ ತಾಯಿ ಹೇಳಿದ್ದೇನು?
ಕರ್ನಾಟಕ

ನಾಪತ್ತೆಯಾದ ಕೇರಳ ಬಾಲಕಿ ಕೇಸಿಗೆ ಟ್ವಿಸ್ಟ್;  ಬಾಲಕಿ ತಾಯಿ ಹೇಳಿದ್ದೇನು?

Share
2 Min Read
SHARE

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣವಾದ ಬಾಬಾಬುಡನ್‌ಗಿರಿಯ ಮಾಣಿಕ್ಯಧಾರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ಪ್ರಕರಣ ಈಗ ಮಹತ್ತರ ತಿರುವು ಪಡೆದುಕೊಂಡಿದೆ. ಇದುವರೆಗೆ ಬಾಲಕಿ ಆಕಸ್ಮಿಕವಾಗಿ ಕಣಿವೆಗೆ ಬಿದ್ದಿರಬಹುದು ಎಂದು ಶೋಧ ನಡೆಸುತ್ತಿದ್ದ ಪೊಲೀಸರಿಗೆ, ಮೃತನ ತಾಯಿಯ ಹೇಳಿಕೆ ಈಗ ತನಿಖೆಯ ದಿಕ್ಕನ್ನೇ ಬದಲಿಸುವಂತೆ ಮಾಡಿದೆ.

ಬಾಲಕಿ ಶ್ರೀನಂದಾ ನಾಪತ್ತೆಯಾಗಿ ಮೂರು ದಿನಗಳ ಕಳೆದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಆಕೆಯ ತಾಯಿ ರೋಹಿಣಿ ಆತಂಕಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ‘ನನ್ನ ಮಗಳು ಆಕಸ್ಮಿಕವಾಗಿ ಎಲ್ಲಿಯೂ ಬಿದ್ದಿರಲು ಸಾಧ್ಯವೇ ಇಲ್ಲ. ಅವಳನ್ನು ಯಾರೋ ಸಂಚು ರೂಪಿಸಿ ಅಪಹರಿಸಿದ್ದಾರೆ. ಅವಳು ಒಬ್ಬಳೇ ಇದ್ದ ಸಮಯವನ್ನು ನೋಡಿ, ಯಾವುದೋ ಮಾದಕ ದ್ರವ್ಯ ನೀಡಿ ಅಥವಾ ಬಲವಂತವಾಗಿ ಕರೆದೊಯ್ದಿದ್ದಾರೆ’ ಎಂದು ರೋಹಿಣಿ ಕಣ್ಣೀರು ಹಾಕುತ್ತಾ ಆರೋಪಿಸಿದ್ದಾರೆ. ಈ ಹೇಳಿಕೆಯು ಸ್ಥಳೀಯ ಪೊಲೀಸರು ಹಾಗೂ ಶೋಧನಾ ತಂಡಗಳಲ್ಲಿ ಸಂಚಲನ ಮೂಡಿಸಿದೆ. ಪ್ರವಾಸಿಗರ ದಟ್ಟಣೆ ಇರುವ ಮಾಣಿಕ್ಯಧಾರದಂತಹ ಪ್ರದೇಶದಲ್ಲಿ ಮಗು ನಾಪತ್ತೆಯಾಗಿರುವುದು ಕೇವಲ ಅಪಘಾತವಲ್ಲ, ಇದೊಂದು ವ್ಯವಸ್ಥಿತ ಕಿಡ್ನಾಪ್ ಇರಬಹುದು ಎಂಬ ಅನುಮಾನ ಈಗ ದಟ್ಟವಾಗಿದೆ.

ಘಟನೆ ನಡೆದ ದಿನದಿಂದಲೂ ಜಿಲ್ಲಾ ಪೊಲೀಸ್ ತಂಡ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಗೈಡ್‌ಗಳು ಮಾಣಿಕ್ಯಧಾರದ ಸುತ್ತಮುತ್ತಲಿನ ಆಳವಾದ ಕಣಿವೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ, ದಟ್ಟವಾದ ಮಂಜು ಮತ್ತು ಕಡಿದಾದ ಹಾದಿಗಳು ಶೋಧ ಕಾರ್ಯಕ್ಕೆ ಅಡ್ಡಿಯುಂಟುಮಾಡುತ್ತಿವೆ. ಬಾಲಕಿ ಆಕಸ್ಮಿಕವಾಗಿ ಬಿದ್ದಿದ್ದರೆ ಇಷ್ಟೊತ್ತಿಗಾಗಲೇ ಏನಾದರೂ ಸುಳಿವು ಸಿಗಬೇಕಿತ್ತು. ಆದರೆ ಯಾವುದೇ ಕುರುಹು ಸಿಗದ ಕಾರಣ ಪೋಷಕರ ಅಪಹರಣದ ಆರೋಪಕ್ಕೆ ಪುಷ್ಟಿ ನೀಡಿದಂತಾಗಿದೆ.

ತನಿಖೆಯ ದಿಕ್ಕು ಬದಲಿಸಿದ ಪೊಲೀಸರು:

ತಾಯಿಯ ಗಂಭೀರ ಆರೋಪದ ಬೆನ್ನಲ್ಲೇ ಚಿಕ್ಕಮಗಳೂರು ಪೊಲೀಸರು ಈಗ ಕೇವಲ ಕಣಿವೆಯಲ್ಲಿ ಹುಡುಕಾಟ ನಡೆಸುವುದಷ್ಟೇ ಅಲ್ಲದೆ, ಪ್ರವಾಸಿ ತಾಣದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಅಂದು ಮಾಣಿಕ್ಯಧಾರಕ್ಕೆ ಬಂದಿದ್ದ ವಾಹನಗಳ ವಿವರ ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ‘ಮಗಳನ್ನು ಹುಡುಕಿಕೊಡಿ, ಅವಳಿಲ್ಲದೆ ನಾವು ಬದುಕಲು ಸಾಧ್ಯವಿಲ್ಲ’ ಎಂದು ತಾಯಿ ರೋಹಿಣಿ ಪೊಲೀಸರ ಕಾಲಿಗೆ ಬಿದ್ದು ಪ್ರಾರ್ಥಿಸುತ್ತಿರುವ ದೃಶ್ಯ ಮನಕಲಕುವಂತಿದೆ. ಬಾಲಕಿ ಶ್ರೀನಂದಾ ಎಲ್ಲಿ ಹೋದಳು? ನಿಜವಾಗಿಯೂ ಅಪಹರಣವಾಗಿದೆಯೇ? ಅಥವಾ ಕಾಡಿನ ಹಾದಿಯಲ್ಲಿ ದಾರಿ ತಪ್ಪಿದ್ದಾಳೆಯೇ? ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

ಪ್ರಸ್ತುತ ಮಾಣಿಕ್ಯಧಾರ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪ್ರತಿಯೊಬ್ಬ ಪ್ರವಾಸಿಯ ಮೇಲೆಯೂ ನಿಗಾ ಇಡಲಾಗುತ್ತಿದೆ.

TAGGED:Twist in missing Kerala girl's case; What did the girl's mother say?
Share This Article
Facebook Twitter Copy Link Print
Previous Article ಸಾವಿನ ಶೋಕದಲ್ಲೂ ಛಲ ಬಿಡದೆ ಸ್ಟೇಟ್ ಟಾಪರ್ ಆದ ದಿಶಾ!
Next Article ಪತ್ನಿಗೆ ನಿದ್ರೆ ಮಾತ್ರೆ ನೀಡಿ ಎದುರು ಮನೆಯವಳ ಜೊತೆ ಚಕ್ಕಂದ ಆಡ್ತಿದ್ದ ಶಿಕ್ಷಕ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?