Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಲಿಕಲ್ ಘಾಟಿ ಕುಸಿತ: ಮೂವರ ಸಾವು, ಕಾಮಗಾರಿ ವೇಳೆ ದುರಂತ
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿ ಕುಸಿತ: ಮೂವರ ಸಾವು, ಕಾಮಗಾರಿ ವೇಳೆ ದುರಂತ

Share
1 Min Read
SHARE

newsics.com

ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ.

ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಾಲಯದ ಸಮೀಪವಿರುವ ಹೇರ್ ಪಿನ್ ತಿರುವಿನಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ (Revetment Wall) ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು.

ಗುರುವಾರ ಸಂಜೆ ಸುಮಾರು 6:30ರ ವೇಳೆಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಏಳು ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.

ಮೃತರ ವಿವರ:

  1. ರಾಘವೇಂದ್ರ (ರಾಘು) (37): ನಗರ ನಿವಾಸಿ ಹಾಗೂ ಕಾಮಗಾರಿ ಮೇಲ್ವಿಚಾರಕ.
  • ರಾಜು (30): ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನೆಲಗಲ್ಲು ಗ್ರಾಮದ ಕಾರ್ಮಿಕ.
  • ಶಬ್ಬೀರ್ (40): ಹಾವೇರಿ ಜಿಲ್ಲೆಯ ನೆಲಗಲ್ಲು ಗ್ರಾಮದ ಕಾರ್ಮಿಕ.

ರಕ್ಷಣಾ ಕಾರ್ಯಾಚರಣೆ:

ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು, ನಗರ ಠಾಣೆಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಣ್ಣಿನಡಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸಿ ಕೂಡಲೇ ಹೊಸನಗರ ಮತ್ತು ಉಡುಪಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಸಂಚಾರ ಅಸ್ತವ್ಯಸ್ತ:

ಈ ಘಟನೆಯಿಂದಾಗಿ ಮಲೆನಾಡು ಮತ್ತು ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಹುಲಿಕಲ್ ಘಾಟಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಆಗುಂಬೆ ಘಾಟಿಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧವಿರುವುದರಿಂದ ಸಾವಿರಾರು ವಾಹನಗಳು ಈ ಮಾರ್ಗದಲ್ಲೇ ಸಂಚರಿಸುತ್ತವೆ. ಗುಡ್ಡ ಕುಸಿತದಿಂದಾಗಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ನಂತರ ವಾಹನಗಳನ್ನು ನಾಗೋಡಿ-ಕೊಲ್ಲೂರು ಮಾರ್ಗವಾಗಿ ಕರಾವಳಿ ಕಡೆಗೆ ಮರಳಿಸಲಾಯಿತು. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಆತ್ಮ*ಹ*ತ್ಯೆ: ತಾಯಿಯ ಅನೈತಿಕ ಸಂಬಂಧಕ್ಕೆ ತನುಶ್ರೀ ಬಲಿಯಾದ್ಲಾ? ತಾಯಿ ಕೈವಾಡ ಶಂಕೆ

ಈ ಬಾರಿ ಪಿಯುಸಿಗಿಲ್ಲ 3ನೇ ಪರೀಕ್ಷೆ, ಏಪ್ರಿಲ್ 30ರಿಂದ 2ನೇ ಪರೀಕ್ಷೆ

TAGGED:Hulikal Ghati collapse: Three deadtragedy during construction
Share This Article
Facebook Twitter Copy Link Print
Previous Article ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಆತ್ಮ*ಹ*ತ್ಯೆ: ತಾಯಿಯ ಅನೈತಿಕ ಸಂಬಂಧಕ್ಕೆ ತನುಶ್ರೀ ಬಲಿಯಾದ್ಲಾ? ತಾಯಿ ಕೈವಾಡ ಶಂಕೆ
Next Article S R Ramaswamy no more ಹಿರಿಯ ನಾಡೋಜ ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಎಸ್. ಆರ್. ರಾಮಸ್ವಾಮಿ ಇನ್ನಿಲ್ಲ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?