Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಪತ್ತೆಯಾಗಿದ್ದ ಕೇರಳ ಬಾಲಕಿ ಮಾಣಿಕ್ಯಧಾರಾ ಫಾಲ್ಸ್‌ನಲ್ಲಿ ಶವವಾಗಿ ಪತ್ತೆ, ಹ*ತ್ಯೆ ಶಂಕೆ
ಕರ್ನಾಟಕದೇಶಪ್ರಮುಖ

ನಾಪತ್ತೆಯಾಗಿದ್ದ ಕೇರಳ ಬಾಲಕಿ ಮಾಣಿಕ್ಯಧಾರಾ ಫಾಲ್ಸ್‌ನಲ್ಲಿ ಶವವಾಗಿ ಪತ್ತೆ, ಹ*ತ್ಯೆ ಶಂಕೆ

Share
2 Min Read
SHARE

newsics.com

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನಾ (15) ಕೊನೆಗೂ ಶವವಾಗಿ ಪತ್ತೆಯಾಗಿದ್ದಾಳೆ.

ಮಾಣಿಕ್ಯಧಾರಾದ 2000 ಅಡಿ ಕೆಳಗೆ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.

ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯವು ದುರಂತ ಅಂತ್ಯ ಕಂಡಿದೆ.

ಮಾಣಿಕ್ಯಧಾರಾ ಜಲಪಾತದ ಬಳಿ ಪ್ರವಾಸಕ್ಕೆಂದು ಬಂದಿದ್ದಾಗ ಕೇವಲ 10 ನಿಮಿಷಗಳ ಅಂತರದಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಪತ್ತೆಗಾಗಿ ಪೊಲೀಸ್, ಅರಣ್ಯ ಇಲಾಖೆ ಹಾಗೂ SDRF ತಂಡಗಳು ಥರ್ಮಲ್ ಡ್ರೋನ್ ಬಳಸಿ ಬೃಹತ್ ಶೋಧ ಕಾರ್ಯ ನಡೆಸಿದ್ದವು.

ಬಾಲಕಿಯ ತಾಯಿ ಇದು ಅಪಹರಣ ಎಂದು ಶಂಕಿಸಿದ್ದ ಬೆನ್ನಲ್ಲೇ ಈಗ ಶವ ಪತ್ತೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಸೃಷ್ಟಿಯಾಗಿವೆ.

ಕೇರಳದ ಪಾಲಕ್ಕಾಡ್ ಮೂಲದ ಶ್ರೀನಂದನಾ ತನ್ನ ಕುಟುಂಬದೊಂದಿಗೆ ಬಾಬಾಬುಡನ್‌ಗಿರಿಯ ದತ್ತಪೀಠಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಮಾಣಿಕ್ಯಧಾರಾ ಜಲಪಾತದ ಬಳಿ ಬಯಲು ಪ್ರದೇಶದಂತಿರುವ ಜಾಗದಲ್ಲಿ ಕೇವಲ 10 ನಿಮಿಷಗಳ ಅಂತರದಲ್ಲಿ ಬಾಲಕಿ ನಾಪತ್ತೆಯಾಗಿದ್ದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿತ್ತು.

ಜಂಟಿ ಕಾರ್ಯಾಚರಣೆ:

ಬಾಲಕಿಯ ಪತ್ತೆಗಾಗಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಎಸ್‌ಡಿಆರ್‌ಎಫ್ (SDRF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಮಂಜು ಮತ್ತು ಕಡಿದಾದ ಕಂದಕಗಳ ನಡುವೆ ಅತ್ಯಾಧುನಿಕ ಥರ್ಮಲ್ ಡ್ರೋನ್‌ಗಳನ್ನು ಬಳಸಿ ಶೋಧ ನಡೆಸಲಾಗಿತ್ತು. ಕೇರಳದ ಪಾಲಕ್ಕಾಡ್‌ನಿಂದಲೂ ವಿಶೇಷ ಪೊಲೀಸ್ ತಂಡ ಆಗಮಿಸಿ ಸ್ಥಳೀಯ ಪೊಲೀಸರೊಂದಿಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು.

ಅಪಹರಣವೋ, ಆಕಸ್ಮಿಕವೋ?

ಬಾಲಕಿ ನಾಪತ್ತೆಯಾದ ಸ್ಥಳದಲ್ಲಿ ಎತ್ತರದ ಕಂದಕಗಳಿರುವುದರಿಂದ ಆಕೆ ಪ್ರಪಾತಕ್ಕೆ ಬಿದ್ದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ, ಬಾಲಕಿಯ ತಾಯಿ ತನ್ನ ಮಗಳನ್ನು ಯಾರೋ ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದು ಪ್ರಕರಣಕ್ಕೆ ಹೊಸ ತಿರುವು ನೀಡಿದ್ದರು. ಸದ್ಯ ಶವ ಪತ್ತೆಯಾಗಿದ್ದು, ಸಾವಿನ ನಿಜವಾದ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

ತನಿಖೆ ತೀವ್ರಗೊಳಿಸಿದ ಪೊಲೀಸರು:

ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್‌ಗಿರಿ ಭಾಗದ ಎಲ್ಲಾ ಚೆಕ್-ಪೋಸ್ಟ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಶವ ಪತ್ತೆಯಾದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ತನಿಖಾ ತಂಡಗಳು ಸಾಕ್ಷ್ಯ ಸಂಗ್ರಹಿಸುತ್ತಿವೆ.

ರೀಲ್ಸ್’ ಹುಚ್ಚಿಗೆ ಜಲಪಾತದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು

16 ವರ್ಷದ ಬಾಲಕಿ ಮೇಲೆ ರೇಪ್ ಮಾಡಿ, ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಆತ್ಮ*ಹ*ತ್ಯೆ: ತಾಯಿಯ ಅನೈತಿಕ ಸಂಬಂಧಕ್ಕೆ ತನುಶ್ರೀ ಬಲಿಯಾದ್ಲಾ? ತಾಯಿ ಕೈವಾಡ ಶಂಕೆ

ಸೀರೆಗೆ ಬಿಕಿನಿ ಬ್ಲೌಸ್ ಧರಿಸಿ ಬಂದ ಖ್ಯಾತ ಸೀರಿಯಲ್ ನಟಿ

TAGGED:Missing Kerala girl found dead in Manikyadhara Fallsmurder suspected
Share This Article
Facebook Twitter Copy Link Print
Previous Article ರೀಲ್ಸ್’ ಹುಚ್ಚಿಗೆ ಜಲಪಾತದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು
Next Article ಹಾರ್ಮುಜ್ ಜಲಸಂಧಿ ಮೇಲೆ ಹಾರಾಡ್ತಿದ್ದಂತೆ ಮಾಯವಾದ ಅಮೆರಿಕದ ಡ್ರೋನ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?