Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ​
ಕರ್ನಾಟಕ

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ​

Share
1 Min Read
SHARE

SSLC ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು.

ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ.

ಅರ್ಜಿದಾರರಿಗೆ 1 ಲಕ್ಷ ದಂಡ!

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್​ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಅರ್ಜಿದಾರರಾದ ಹೆಚ್.ಎನ್.ಚಂದನಾ ಮತ್ತು ಎಸ್.ವೆಂಕಟೇಶ್​​ಗೆ 1 ಲಕ್ಷ ರೂಪಾಯಿ ದಂಡ ವಿಧಿಸಿರುವ ಹೈಕೋರ್ಟ್​​, ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಆ ಮೂಲಕ ಅರ್ಜಿದಾರರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.

SSLC ತೃತೀಯ ಭಾಷೆಗಳ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿದ್ದವಾದರೂ, ಬಿಜೆಪಿಯ ಕೆಲವು ನಾಯಕರು ಸೇರಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರವಾಗಿ ಸ್ವತಃ ಮಧ್ಯಪ್ರವೇಶ ಮಾಡಿದ್ದ ರಾಜ್ಯಪಾಲರು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲನೀಶ್​​ಗೆ ಪತ್ರ ಕೂಡ ಬರೆದಿದ್ದರು. ಗವರ್ನರ್​​ ಈ ನಡೆ ವಿರುದ್ಧ ಸಿಡಿದೆದ್ದಿದ್ದ ಕರವೇ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ನಿಮ್ಮ ಅಧಿಕಪ್ರಸಂಗವನ್ನು ಕರ್ನಾಟಕದ ಜನತೆ ಒಪ್ಪಿಕೊಳ್ಳುವುದಿಲ್ಲ. ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ಈ ರೀತಿ ಮಾಡೋದು ತಪ್ಪು. ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ ಎಂದು ವಾಗ್ದಾಳಿ ನಡೆಸಿತ್ತು.

TAGGED:PIL challenging grade instead of marks for SSLC third language: High Court gives big shock to petitioners
Share This Article
Facebook Twitter Copy Link Print
Previous Article ಮೊನಾಲಿಸಾ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್ ದಾಖಲು !
Next Article ಪಾರ್ಕಿಂಗ್ ವಿಚಾರಕ್ಕೆ ಜಗಳ; ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?