Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪಾರ್ಕಿಂಗ್ ವಿಚಾರಕ್ಕೆ ಜಗಳ; ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ
ದೇಶ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ

Share
1 Min Read
SHARE

ಕಾನೂನು ಕೈಗೆತ್ತಿಕೊಂಡರೆ ಆಗುವ ಅನಾಹುತಕ್ಕೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಸಾಕ್ಷಿಯಾಗಿದೆ. ಗುರುವಾರ ಇಲ್ಲಿ ನಡೆದ ಅವಳಿ ಕೊಲೆ(Murder)ಗಳು ಕೇವಲ ಕ್ರೌರ್ಯದ ಪರಾಕಾಷ್ಠೆಯಲ್ಲ, ಬದಲಿಗೆ ಕಾನೂನು ಸುವ್ಯವಸ್ಥೆಯ ವೈಫಲ್ಯದ ಪ್ರತಿಬಿಂಬದಂತಿದೆ.

ಘಟನೆಯ ಆರಂಭವಾಗಿದ್ದು ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ. ರಸ್ತೆಬದಿಯ ವ್ಯಾಪಾರಿ ರವಿ ಚೌಹಾಣ್ ಹಾಗೂ ಪಿಕಪ್ ಚಾಲಕ ಅಲಿ ಹುಸೇನ್ ನಡುವೆ ವಾಹನ ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ‘ಈ ಸಣ್ಣ ಜಗಳ ವಿಕೋಪಕ್ಕೆ ತಿರುಗಿದಾಗ, ರವಿ ಚೌಹಾಣ್ ಅತ್ಯಂತ ಕ್ರೂರವಾಗಿ ಅಲಿ ಹುಸೇನ್ ಮೇಲೆ ಹಲ್ಲೆ ನಡೆಸಿ, ನೂರಾರು ಜನರ ಮುಂದೆಯೇ ಆತನ ಶಿರಚ್ಛೇದ ಮಾಡಿದ್ದಾನೆ.

ಅಷ್ಟಕ್ಕೇ ನಿಲ್ಲದ ಹಂತಕ, ಕತ್ತರಿಸಿದ ತಲೆಯನ್ನು ಹಿಡಿದು ರಸ್ತೆಯಲ್ಲಿ ಮೆರವಣಿಗೆ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ನಂತರ ಶವವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘೋರ ಕೃತ್ಯದ ಸುದ್ದಿ ತಿಳಿಯುತ್ತಿದ್ದಂತೆಯೇ ಅಲಿ ಹುಸೇನ್ ಸಂಬಂಧಿಕರು ಮತ್ತು ಸ್ಥಳೀಯರು ಆಕ್ರೋಶಗೊಂಡರು. ಚೌಹಾಣ್ ಅಡಗಿದ್ದ ಜಾಗಕ್ಕೆ ನುಗ್ಗಿದ ಜನಸಮೂಹ, ಆತನನ್ನು ಎಳೆದೊಯ್ದು ಅದೇ ಅಪರಾಧ ನಡೆದ ಸ್ಥಳಕ್ಕೆ ತಂದಿದೆ. ಪೊಲೀಸರು ಸ್ಥಳದಲ್ಲಿದ್ದರೂ ಸಹ, ಕೋಪಗೊಂಡ ಗುಂಪು ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿರಲಿಲ್ಲ.

ಪೊಲೀಸರ ಕಣ್ಣೆದುರೇ ರವಿ ಚೌಹಾಣ್ ಮೇಲೆ ಕೋಲು ಮತ್ತು ಕಬ್ಬಿಣದ ರಾಡ್‌ಗಳಿಂದ ಭೀಕರವಾಗಿ ಹಲ್ಲೆ ನಡೆಸಲಾಗಿದೆ. ರಕ್ತಪಿಪಾಸುಗಳಂತೆ ವರ್ತಿಸಿದ ಗುಂಪು ಆತನನ್ನು ಅಲ್ಲಿಯೇ ಹೊಡೆದು ಕೊಂದಿದೆ.

ಒಂದೇ ದಿನ ನಡೆದ ಈ ಎರಡು ಭೀಕರ ಕೊಲೆಗಳಿಂದಾಗಿ ಇಡೀ ಪ್ರದೇಶ ಸ್ಮಶಾನ ಸದೃಶವಾಗಿದೆ. ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಕೈಮೀರುತ್ತಿರುವುದನ್ನು ಕಂಡು ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ಇಡೀ ಪ್ರದೇಶದಲ್ಲಿ ಗಸ್ತು ಚುರುಕುಗೊಳಿಸಲಾಗಿದ್ದು, ಎರಡು ಕಡೆಯ ಹತ್ಯೆಗಳ ಬಗ್ಗೆ ತನಿಖೆ ಆರಂಭಿಸಲಾಗಿದೆ. ಒಂದು ಸಣ್ಣ ಪಾರ್ಕಿಂಗ್ ವಿವಾದವು ಎರಡು ಕುಟುಂಬಗಳನ್ನು ಬೀದಿಪಾಲು ಮಾಡಿದ್ದು, ಇಡೀ ಜಿಲ್ಲೆಯನ್ನು ಆತಂಕದ ಸುಳಿಯಲ್ಲಿ ಸಿಲುಕಿಸಿದೆ.

 

TAGGED:Argument over parking issue; People kill accused in front of police
Share This Article
Facebook Twitter Copy Link Print
Previous Article SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ​
Next Article ದೋಸೆ ತಿಂದು ಮಕ್ಕಳು ಸಾವನಪ್ಪಿದ್ದ ಪ್ರಕರಣಕ್ಕೆ ಟ್ವಿಸ್ಟ್​!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?