Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೀನಂದಾ ಸಾವು ಹೇಗಾಯ್ತು? ಪೊಲೀಸರಿಗೀಗ ಹೊಸ ಅನುಮಾನ
ಕರ್ನಾಟಕದೇಶಪ್ರಮುಖ

ಶ್ರೀನಂದಾ ಸಾವು ಹೇಗಾಯ್ತು? ಪೊಲೀಸರಿಗೀಗ ಹೊಸ ಅನುಮಾನ

Share
2 Min Read
SHARE

 

newsics.com

ಚಿಕ್ಕಮಗಳೂರು: ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ  ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (Srinanda) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ ವೇಳೆ ಆಕೆ ನಾಪತ್ತೆಯಾಗಿದ್ದಳು.

ಬಳಿಕ ಕುಟುಂಬದವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಬಳಿಕ ಅರಣ್ಯ ಇಲಾಖೆ, ಪೊಲೀಸರು, ಸೇರಿದಂತೆ ಇತರೆ ರಕ್ಷಣಾ ತಂಡಗಳು ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದು ಅಂತಿಮವಾಗಿ ಇಂದು (ಏಪ್ರಿಲ್ 10) ಶ್ರೀನಂದಾ 2000 ಅಡಿ ಆಳದ ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಆದರೆ, ಶ್ರೀನಂದಾ ಜಲಪಾತಕ್ಕೆ ಹೇಗೆ ಬಿದ್ದಿದ್ದಾಳೆ ಎನ್ನುವುದೇ ನಿಗೂಢವಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದ್ರೆ, ಇದೀಗ ಶ್ರೀನಂದಾ ತಂದೆ, ಪೊಲೀಸರ ಮುಂದೆ ಹೇಳಿರುವ ಅದೊಂದು ಹೇಳಿಕೆ ಶ್ರೀನಂದಾ ಸಾವಿನ ಬಗ್ಗೆ ಮತ್ತೊಂದು ಅನುಮಾನ ಮೂಡಿಸಿದ್ದು, ತಂದೆ ಬೈದಿದ್ದಕ್ಕೆ ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆ ದಿನ ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಮಾಣಿಕ್ಯಾಧಾರದ ಮೆಟ್ಟಿಲುಗಳನ್ನು ಇಳಿಯುತ್ತಿದ್ದರು. ಕುಟುಂಬದ ಸದಸ್ಯರೆಲ್ಲಾ ಮುಂದೆ ಹೋಗುತ್ತಿದ್ದರೆ, ಬಾಲಕಿ ಶ್ರೀನಂದಾ ಅವರ ಹಿಂದೆಯೇ ಬರುತ್ತಿದ್ದಳು. ಆದರೆ, ಒಂದು ತಿರುವಿನಲ್ಲಿ ನೋಡುವಷ್ಟರಲ್ಲಿ ಆಕೆ ಅಲ್ಲಿರಲಿಲ್ಲ. ಕ್ಷಣಾರ್ಧದಲ್ಲಿ ಬಾಲಕಿ ದಟ್ಟ ಕಾನನದ ನಡುವೆ ನಾಪತ್ತೆಯಾದ್ದಳು. ಇದರಿಂದ ಆತಂಕಗೊಂಡ ಕುಟುಂಬಸ್ಥರು ಸುತ್ತಮುತ್ತ ಗಾಬರಿಯಿಂದ ಹುಡುಕಾಡಿದರೂ ಆಕೆಯ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಈಗ ಇರುವ ಅನುಮಾನ ಬಾಲಕಿ ಕಾಡು ಪ್ರಾಣಿಗಳ ದಾಳಿಗೆ ಒಳಗಾಗಿದ್ದಾಳೋ ಅಥವಾ ಆಕಸ್ಮಿಕವಾಗಿ ಕಂದಕಕ್ಕೆ ಬಿದ್ದಿದ್ದಾಳೋ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದವು. ಆದರೆ, ಇದೀಗ ತಂದೆ ಹೇಳಿಕೆ ಶ್ರೀನಂದಾ ಸಾವಿನ ಸುತ್ತ ಮತ್ತೊಂದು ಅನುಮಾನ ವ್ಯಕ್ತವಾಗಿದೆ.

ಇದನ್ನೂ ನೋಡಿ: 2000 ಅಡಿ ಆಳದ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ
ಮೂರು ದಿನಗಳ ಕಾಲ ನಿರಂತರ ಶೋಧ ಕಾರ್ಯಾಚರಣೆ ನಡೆದ ಬಳಿಕ, ಅರಿಶಿನಗುಪ್ಪೆ ಭಾಗದಿಂದ ಹೊರಟ ಶೋಧ ತಂಡಕ್ಕೆ ಸುಮಾರು ಮೂರ್ನಾಲ್ಕು ಕಿಲೋಮೀಟರ್ ದೂರದಲ್ಲಿರುವ ಆಳವಾದ ಕಂದಕದ ಬಳಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಈ ಪ್ರಪಾತವು ಸುಮಾರು 2000 ಅಡಿ ಆಳವಿದೆ. ಅತ್ಯಂತ ದುರ್ಗಮ ಪ್ರದೇಶವಾಗಿರುವ ಕಾರಣ ಶವವನ್ನು ಹೊರತೆಗೆದು ಮೇಲೆ ಎತ್ತಿಕೊಂಡು ಬರುವ ಕಾರ್ಯವೂ ಸವಾಲಿನದ್ದಾಗಿತ್ತು. ಇನ್ನು ಶ್ರೀನಂದಾ ಮೃತದೇಹ ಪತ್ತೆಯಾದ ಬಳಿಕ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದ್ರೆ, ಇದೀಗ ತಂದೆ ರಮೇಶ್, ಮೊಬೈಲ್ ವಿಚಾರಕ್ಕೆ ಮಗಳಿಗೆ ಬೈದಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿದ್ದಾರೆ. ಇದರಿಂದ ಶ್ರೀನಂದಾ, ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ.
ಶ್ರೀನಂದಾ ತಂದೆ ರಮೇಶ್ ಅವರು ಮೊಬೈಲ್ ವಿಚಾರಕ್ಕೆ ಮಗಳಿಗೆ ಬೈದಿದ್ದ ಬಗ್ಗೆ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ಮಾಣಿಕ್ಯಧಾರಾ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಶ್ರೀನಾಂದಗೆ ತಂದೆ ರಮೇಶ್​​ ಬೈದಿದ್ದು, ಅಲ್ಲದೇ ಮೊಬೈಲ್ ಕೊಡುವಂತೆ ವಾರ್ನ್​ ಮಾಡಿದ್ದ. ಇದರಿಂದ ಮನನೊಂದು ಶ್ರೀನಂದಾ, ಮಾಣಿಕ್ಯಧಾರಾದ ಫಾಲ್ಸ್​ಗೆ ತೆರಳದೆ ವಾಪಸ್ ಆಗಿದ್ದಳು. ಬಳಿಕ ಶ್ರೀನಂದಾ ಕಾಣೆಯಾಗಿದ್ದಳು.

ಈ ಹಿನ್ನೆಲೆಯಲ್ಲಿ ತಂದೆ ಬೈದಿದ್ದಕ್ಕೆ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾ ಪಾರ್ಕಿಂಗ್ ಸ್ಥಳದಿಂದ ಜಿಗಿದಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಪೊಲೀಸರು ಸಹ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ‘ಹೆಚ್‌ಐವಿ’ ರಕ್ತ ಚುಚ್ಚಿದ ಕಿರಾತಕ: ಆಗಿದ್ದೇನು?

ಪಾಪರಾಜಿಗಳ ಅತಿರೇಕದ ವರ್ತನೆಗೆ ಗರಂ ಆದ ಜಾಹ್ನವಿ ಕಪೂರ್

ದೋಸೆ ತಿಂದು ಮಕ್ಕಳು ಸಾವನಪ್ಪಿದ್ದ ಪ್ರಕರಣಕ್ಕೆ ಟ್ವಿಸ್ಟ್​!

ಗೆಳೆಯರಾಗಿದ್ದವರೆ ಈಗ ಶತ್ರುಗಳು; 28ಕ್ಕೂ ಅಧಿಕ ಚಿಂಪಾಂಜಿ ಸಾವು

TAGGED:How did Srinanda die? Police now have new suspicions
Share This Article
Facebook Twitter Copy Link Print
Previous Article 10,000ರೂ.ಕಳಿಸಿದ್ರೆ ನಿಮ್ಮ ಖಾತೆ ಗಂಟೆ ಲಾಕ್; ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ
Next Article ಶಾರೀರಿಕವಾಗಿ ಕುಳ್ಳಗಿರುವ ಯುವಕನನ್ನೇ ಪ್ರೀತಿ ಮಾಡಿ ಮದುವೆಯಾದ ಯುವತಿ: ರಕ್ಷಣೆ ಕೋರಿ ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿ

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?