Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 10,000ರೂ.ಕಳಿಸಿದ್ರೆ ನಿಮ್ಮ ಖಾತೆ ಗಂಟೆ ಲಾಕ್; ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ
ಪ್ರಮುಖ

10,000ರೂ.ಕಳಿಸಿದ್ರೆ ನಿಮ್ಮ ಖಾತೆ ಗಂಟೆ ಲಾಕ್; ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ

Share
2 Min Read
SHARE

 

ಆನ್ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಡಿಜಿಟಲ್ ಪೇಮೆಂಟ್ ಸಿಸ್ಟಂನಲ್ಲಿ (Digital payment system) ಸರ್ಕಾರ ಒಂದಷ್ಟು ಮಾರ್ಪಾಡು ಮಾಡಲು ಹೊರಟಿದೆ. ಡಿಜಿಟಲ್ ಪೇಮೆಂಟ್ ಅನ್ನು ಹೆಚ್ಚು ಸುರಕ್ಷಿತವಾಗಿಸಲು ಅಧಿಕ ಮೌಲ್ಯದ ವಹಿವಾಟುಗಳಿಗೆ ಒಂದು ಗಂಟೆ ವಿಳಂಬ ಪಾವತಿ ವ್ಯವಸ್ಥೆ ತರುವ ಪ್ರಸ್ತಾಪವ ಆರ್​ಬಿಐ ಮುಂದಿದೆ ಎಂದು ವರದಿಗಳು ಹೇಳುತ್ತಿವೆ.

ಈ ಪ್ರಸ್ತಾಪದ ಪ್ರಕಾರ ಯುಪಿಐ ಮತ್ತು ಐಎಂಪಿಎಸ್ ಇತ್ಯಾದಿ ಮೂಲಕ ಮಾಡಲಾಗುವ 10,000 ರೂಗೂ ಅಧಿಕ ಮೊತ್ತದ ಪೇಮೆಂಟ್​ಗಳು ರಿಯಲ್ ಟೈಮ್​ನಲ್ಲಿ ಸಂದಾಯವಾಗುವುದಿಲ್ಲ.

ಗಮನಿಸಬೇಕಾದ ಸಂಗತಿ ಎಂದರೆ ಈ ನಿರ್ಬಂಧವು ವ್ಯಕ್ತಿಯಿಂದ ವ್ಯಕ್ತಿಗೆ ಮಾಡಲಾಗುವ ಪೇಮೆಂಟ್​ಗೆ ಅನ್ವಯ ಆಗುತ್ತದೆ. ವರ್ತಕರಿಗೆ ಮಾಡಲಾಗುವ ಪೇಮೆಂಟ್​ಗಳು ಮಾಮೂಲಿ ರೀತಿಯಲ್ಲಿ ರಿಯಲ್​ಟೈಮ್​ನಲ್ಲೇ ಆಗುತ್ತವೆ.

10,000 ರೂಗಿಂತ ಹೆಚ್ಚಿನ ಮೊತ್ತದ ಪೇಮೆಂಟ್ ಮಾಡಿದಾಗ ಒಂದು ಗಂಟೆಯ ಕೂಲಿಂಗ್ ಪೀರಿಯಡ್ ಜಾರಿಗೆ ಬರುತ್ತದೆ. ಈ ಸಂದರ್ಭದಲ್ಲಿ ಆ ಹಣವು ತತ್​ಕ್ಷಣವೇ ವ್ಯಕ್ತಿಯ ಖಾತೆಗೆ ರವಾನೆಯಾಗುವುದಿಲ್ಲ. ಆನ್​ಲೈನ್​ನಲ್ಲಿ ಕೆಲವರು ಲಿಂಕ್​ಗಳನ್ನು ಕಳುಹಿಸಿ ಅಕ್ರಮವಾಗಿ ಪೇಮೆಂಟ್ ಮಾಡಿಸಿಕೊಳ್ಳುತ್ತಿರುವ ಪ್ರಕರಣಗಳು ಹಲವು ಬೆಳಕಿಗೆ ಬರುತ್ತಿವೆ. ಹಾಗೆಯೇ, ಯುಪಿಐ ಗ್ರಾಹಕರು ತಪ್ಪಾಗಿ ಹಣ ಕಳುಹಿಸುವ ಸಾಧ್ಯತೆಗಳಿರುತ್ತವೆ. ಇದನ್ನು ತಪ್ಪಿಸಲು ಆರ್​ಬಿಐ ಈ ರೀತಿಯ ಕ್ರಮ ತೆಗೆದುಕೊಂಡಿದೆ.

ಪರಿಚಿತ ವ್ಯಕ್ತಿಗಳ ವೈಟ್​ಲಿಸ್ಟ್

ಆರ್​ಬಿಐ ಬಳಿ ಇನ್ನೊಂದು ಪ್ರಸ್ತಾಪ ಇದೆ. ಹಣ ಕಳುಹಿಸಲಾಗುವ ವ್ಯಕ್ತಿಗಳು ಅಪರಿಚಿತರಾಗಿದ್ದರೆ ರಿಯಲ್​ಟೈಮ್​ನಲ್ಲಿ ಪೇಮೆಂಟ್ ಮಾಡುವುದು ಅಪಾಯ ಆಗಬಹುದು. ಆದರೆ, ಪರಿಚಿತರಾಗಿದ್ದರೆ? ಆರ್​ಬಿಐ ಇದಕ್ಕೊಂದು ಪರಿಹಾರ ಹುಡುಕಿದೆ. ನೆಟ್​ಬ್ಯಾಂಕಿಂಗ್​ನಲ್ಲಿ ಇರಲಾಗುವಂತೆ ಪರಿಚಿತ ಅಥವಾ ಖಾತ್ರಿ ಇರುವ ವ್ಯಕ್ತಿಗಳಿಗೆ ಪೂರ್ವಾನುಮತಿ ಕೊಡಲು ವೈಟ್​ಲಿಸ್ಟಿಂಗ್​ನಂತಹ ವ್ಯವಸ್ಥೆ ಮಾಡುವುದು ಆರ್​ಬಿಐನ ಉದ್ದೇಶವಾಗಿದೆ.

10,000ಕ್ಕೂ ಹೆಚ್ಚಿನ ಮೊತ್ತದ ಟ್ರಾನ್ಸಾಕ್ಷನ್​ಗಳ ಮೇಲೆ ಆರ್​ಬಿಐ ನಿರ್ಬಂಧ ಹಾಕಲು ಕಾರಣವಿದೆ. ಹೆಚ್ಚಿನ ಫ್ರಾಡ್ ಕೇಸ್​ಗಳು ಈ ಮೊತ್ತದ ಟ್ರಾನ್ಸಾಕ್ಷನ್​ಗಳಿಗೆ ಸಂಬಂಧಿಸಿದ್ದೇ ಆಗಿವೆ. ಈ ಫ್ರಾಡ್​ಗಳಿಗೆ ಜನರು ಕಳೆದುಕೊಂಡಿರುವ ಒಟ್ಟೂ ಹಣದ ಶೇ. 98.5ರಷ್ಟು ಮೊತ್ತವು ಈ ಕೆಟಗರಿಯದ್ದಾಗಿದೆ. ಹೀಗಾಗಿ, ವ್ಯಕ್ತಿಯಿಂದ ವ್ಯಕ್ತಿಗೆ ಮಾಡಲಾಗುವ 10,000 ರೂಗೂ ಅಧಿಕ ಯುಪಿಐ, ಐಎಂಪಿಎಸ್ ಪೇಮೆಂಟ್ ನಿಯಮವನ್ನು ಆರ್​ಬಿಐ ಬಿಗಿಗೊಳಿಸಲು ಮುಂದಾಗಿದೆ.

 

ಯಮುನಾ ನದಿಯಲ್ಲಿ 30 ಭಕ್ತರಿದ್ದ ದೋಣಿ ಮಗುಚಿ,10 ಮಂದಿ ಸಾವು

 

TAGGED:000If you send Rs 10your account will be locked for an hour; RBI plans new measures
Share This Article
Facebook Twitter Copy Link Print
Previous Article ಯಮುನಾ ನದಿಯಲ್ಲಿ 30 ಭಕ್ತರಿದ್ದ ದೋಣಿ ಮಗುಚಿ,10 ಮಂದಿ ಸಾವು
Next Article ಶ್ರೀನಂದಾ ಸಾವು ಹೇಗಾಯ್ತು? ಪೊಲೀಸರಿಗೀಗ ಹೊಸ ಅನುಮಾನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?