Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ
ಕರ್ನಾಟಕ

ಕಾಂಗ್ರೆಸ್‌ನಲ್ಲಿ ಮತ್ತೆ ಗರಿಗೆದರಿದ ರಾಜಕೀಯ ಚಟುವಟಿಕೆ

Share
1 Min Read
SHARE

ರಾಜ್ಯದಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆಯೇ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ (Congress) ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆಗಳು ಗರಿಗೆದರಿವೆ. ಸಚಿವ ಸಂಪುಟ ಪುನರ್‌ ರಚನೆಯಾಗಲಿದೆ ಎಂಬ ನಿರೀಕ್ಷೆಯಲ್ಲಿರುವ 20ಕ್ಕೂ ಹೆಚ್ಚು ಹಿರಿಯ ಶಾಸಕರು ಭಾನುವಾರ ದೆಹಲಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಲು ಸಜ್ಜಾಗಿದ್ದಾರೆ.

ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಮತ್ತು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನೇತೃತ್ವದಲ್ಲಿ ಶಾಸಕರ ತಂಡ ನಾಳೆ ದೆಹಲಿಗೆ ತೆರಳಲಿದೆ. ಈ ತಂಡದಲ್ಲಿ ಮೂರರಿಂದ ಆರು ಬಾರಿ ಗೆದ್ದಿರುವ ಅನುಭವಿ ಶಾಸಕರು ಸೇರಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಮನವಿ ಸಲ್ಲಿಸುವುದು ಶಾಸಕರ ಈ ಯಾತ್ರೆಯ ಮುಖ್ಯ ಉದ್ದೇಶ ಎಂದು ಉನ್ನತ ಮೂಲಗಳು ತಿಳಿಸಿವೆ.

ಶಾಸಕರ ಬೇಡಿಕೆ ಏನು?

ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆಯುತ್ತಾ ಬಂದಿವೆ. ಆರಂಭದಲ್ಲಿ ಎರಡೂವರೆ ವರ್ಷದ ನಂತರ ಸಂಪುಟ ಪುನರ್‌ ರಚನೆ ಮಾಡಿ ಹೊಸಬರಿಗೆ ಅವಕಾಶ ನೀಡಲಾಗುವುದು ಎಂಬ ಭರವಸೆ ನೀಡಲಾಗಿತ್ತು. ಪಕ್ಷಕ್ಕಾಗಿ ನಾವು ನಿರಂತರವಾಗಿ ದುಡಿದಿದ್ದೇವೆ. ಉಳಿದಿರುವ ಎರಡು ವರ್ಷದ ಅವಧಿಗಾದರೂ ನಮಗೆ ಸಚಿವ ಸ್ಥಾನ ನೀಡಬೇಕು ಎಂಬುದು ಶಾಸಕರ ವಾದವಾಗಿದೆ. ಇದಕ್ಕಾಗಿ ಸಂಪುಟ ಪುನರ್‌ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುವಂತೆ ಹೈಕಮಾಂಡ್‌ಗೆ ಅವರು ಒತ್ತಾಯಿಸಲಿದ್ದಾರೆ.

ಹೈಕಮಾಂಡ್ ತೀರ್ಮಾನಕ್ಕೆ ಬದ್ಧ

ನಾಯಕತ್ವ ಬದಲಾವಣೆಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಶಾಸಕರು, ‘ನಾಯಕತ್ವದ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು, ವರಿಷ್ಠರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಆದರೆ ಸಚಿವ ಸಂಪುಟದಲ್ಲಿ ಹಿರಿಯ ಮತ್ತು ಅನುಭವಿ ಶಾಸಕರಿಗೆ ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ. ಏಪ್ರಿಲ್ 17ರ ನಂತರ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಕೂಡ ದೆಹಲಿಗೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನವೇ ಈ ಶಾಸಕರ ತಂಡ ವರಿಷ್ಠರ ಮನವೊಲಿಸಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

TAGGED:Political activity in Congress flares up as soon as the elections are over
Share This Article
Facebook Twitter Copy Link Print
Previous Article ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!
Next Article ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಸ್ಪೆಲ್ಲಿಂಗ್ ಮಿಸ್ಟೇಕ್ ಆದ್ರೆ ಟೆನ್ಷನ್ ಬೇಡ!

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?