Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!
ಕರ್ನಾಟಕ

ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

Share
2 Min Read
SHARE

ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ಸವಾರನಿಗೆ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಹೈಕೋರ್ಟ್ ಸಮುದಾಯ ಶಿಕ್ಷೆ ವಿಧಿಸಿದೆ.

ಮೈಸೂರು ರಸ್ತೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ವ್ಯಕ್ತಿಯು ಸಮುದಾಯ ಸೇವೆ ಮಾಡುವುದಾಗಿ ಹೇಳಿರುವುದನ್ನು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಹಸಿರು ಲ್ಯಾಂಬೊರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಮತ್ತೆ ಲ್ಯಾಂಬೊರ್ಗಿನಿಯಲ್ಲಿ ಬನ್ನಿ ಎಂದು ಮೌಖಿಕವಾಗಿ ಸೂಚಿಸಿದೆ.

ಕೆಲವರಿಗೆ ಹೈ ಎಂಡ್ ಕಾರಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ಅತಿ ವೇಗದ ಚಾಲನೆ ಮಾಡೊ ಖಯಾಲಿಯಾಗಿದೆ. ಇದೇ ರೀತಿ ಅಜಾಗರೂಕತೆಯಿಂದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಸಮುದಾಯ ಸೇವಾ ಶಿಕ್ಷೆ ವಿಧಿಸಿದೆ.

ಆರೋಪಿಯು ತನ್ನದೇ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಿನಲ್ಲಿ ವಾಪಸ್ ಬರಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಹಸಿರು ಲ್ಯಾಂಬೋರ್ಗಿನಿಯಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಮತ್ತದೇ ಕಾರಿನಲ್ಲಿ ವಾಪಸ್ ಬನ್ನಿ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಮೌಖಿಕವಾಗಿ ಸೂಚನೆ ನೀಡಿದೆ.

ಜನವರಿ 20 ರಂದು ಚಿರಂತನ್ ಎಂಬಾತ ಕೆಂಗೇರಿ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ತನ್ನ ಲ್ಯಾಂಬೋರ್ಗಿನಿ ಕಾರನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ. ಈ ಸಂಬಂಧ ಬಿಎನ್‌ಎಸ್ 281 ಮತ್ತು ಐಎಂವಿ ಕಾಯ್ದೆಯ 177ನೇ ಸೆಕ್ಷನ್ ಅಡಿಯಲ್ಲಿ ಆತನ ವಿರುದ್ಧ ಕೆಂಗೇರಿ ಸಂಚಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್‌ ರದ್ದು ಕೋರಿ ಲ್ಯಾಂಬೋರ್ಗಿನಿ ಕಾರು ಚಾಲಕ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಪ್ರಕರಣದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದ ಮುಂದೆ ಬಂದಿತ್ತು. ವಿಚಾರಣೆ ವೇಳೆ ಆರೋಪಿ ಪರ ವಕೀಲರು, ತಮ್ಮ ಕಕ್ಷಿದಾರನಿಗೆ ಪಶ್ಚಾತ್ತಾಪವಾಗಿದೆ ಎಂದು ತಿಳಿಸಿದ್ದರು. ಅಲ್ಲದೇ, ಬಿಎನ್‌ಎಸ್ ಅಡಿಯಲ್ಲಿ ಸಮುದಾಯ ಸೇವೆಗೆ ಕೆಲವು ಅವಕಾಶಗಳಿದ್ದು, ಆರೋಪಿಯು ಮಕ್ಕಳಿಗೆ ಸಂಚಾರ ನಿಯಮಗಳ ಕುರಿತು ಪಾಠ ಮಾಡುವುದಾಗಿ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರು ಲ್ಯಾಂಬೋರ್ಗಿನಿ ಕಾರಿನಲ್ಲಿ ನಿಯಮ ಉಲ್ಲಂಘಿಸಿದ ವ್ಯಕ್ತಿ ಮಕ್ಕಳಿಗೆ ಸಂಚಾರ ನಿಯಮಗಳ ಪಾಠ ಮಾಡುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದರು. ಬದಲಿಗೆ ಆರೋಪಿಯಿಂದ ಗಿಡಗಳನ್ನು ನೆಡಿಸುವುದು ಸೂಕ್ತ ಎಂದು ನ್ಯಾಯಾಲಯಕ್ಕೆ ಸಲಹೆ ನೀಡಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ಹೈಕೋರ್ಟ್ ಪೀಠ, ಚಿರಂತನ್‌ಗೆ ಕಸ ಗುಡಿಸುವ ಸಮುದಾಯ ಶಿಕ್ಷೆ ವಿಧಿಸಿತು. ಈ ಸಮುದಾಯ ಶಿಕ್ಷೆಯ ದಿನಾಂಕ ಮತ್ತು ಸಮಯವನ್ನು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗುವುದು ಎಂದು ಹೇಳಿದೆ.

TAGGED:'Get in a green Lamborghini and sweep the streets': High Court sentences driver for showing off his arrogance by violating traffic rules!
Share This Article
Facebook Twitter Copy Link Print
Previous Article ಸಿಎಂ ಸಿದ್ದರಾಮಯ್ಯಗೆ ಯುವಕನಿಂದ ಅಸಭ್ಯ ನಿಂದನೆ: ಏಕವಚನದಲ್ಲಿ ಬೈದು ರೀಲ್ಸ್​
Next Article ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ!

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?