ಕೊಪ್ಪಳ: ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣವೊಂದು ಭಾರಿ ಸಂಚಲನ ಮೂಡಿಸಿದೆ. ನರ್ಸಿಂಗ್ ಓದುತ್ತಿದ್ದ ಹಿಂದೂ ವಿದ್ಯಾರ್ಥಿನಿಯನ್ನು ಪುಸಲಾಯಿಸಿದ ಆರೋಪದ ಮೇಲೆ ಮುಸ್ಲಿಂ ಯುವಕನೋರ್ವನನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಆರೋಪಿತ ಯುವಕನ ಮೊಬೈಲ್‌ನಲ್ಲಿ ಹಲವು ಹಿಂದೂ ಯುವತಿಯರ ಆಕ್ಷೇಪಾರ್ಹ ವಿಡಿಯೋಗಳು ಪತ್ತೆಯಾಗಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಕೊಪ್ಪಳ ತಾಲೂಕಿನ ಕಂಪ್ಲಿ ಗ್ರಾಮದ ಮುಸ್ತಫಾ ಎಂಬ ಯುವಕ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಕುಷ್ಟಗಿ ತಾಲೂಕಿನ ಗ್ರಾಮವೊಂದರ ಹಿಂದೂ ವಿದ್ಯಾರ್ಥಿನಿ ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಜೊತೆ ಮುಸ್ತಫಾ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಇತ್ತೀಚೆಗೆ ಕೊಪ್ಪಳ ನಗರದಲ್ಲಿ ಇವರಿಬ್ಬರೂ ಜೊತೆಯಾಗಿ ಓಡಾಡುತ್ತಿದ್ದ ವೇಳೆ ಸ್ಥಳೀಯ ಹಿಂದೂ ಯುವಕರ ಕಣ್ಣಿಗೆ ಬಿದ್ದಿದ್ದಾರೆ. ಅನುಮಾನಗೊಂಡ ಯುವಕರು ಮುಸ್ತಫಾನನ್ನು ತಡೆದು ವಿಚಾರಣೆ ನಡೆಸಿದ್ದಾರೆ.
ಹಿಂದೂ ಯುವಕರು ಮುಸ್ತಫಾನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ಸತ್ಯಾಂಶಗಳು ಹೊರಬಂದಿವೆ ಎನ್ನಲಾಗಿದೆ. ಮುಸ್ತಫಾನ ಮೊಬೈಲ್‌ನಲ್ಲಿ ಕೇವಲ ಈ ವಿದ್ಯಾರ್ಥಿನಿ ಮಾತ್ರವಲ್ಲದೆ, ಜಿಲ್ಲೆಯ ಹಲವಾರು ಹಿಂದೂ ಯುವತಿಯರ ಫೋಟೋಗಳು ಮತ್ತು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ.
ಅಲ್ಲದೆ, ಈತ ‘ಮಟ್ಕಾ’ ಎಂಬ ಅಕ್ರಮ ಜೂಜಾಟದ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ತಿಳಿದುಬಂದಿದೆ. ವಿಚಾರಣೆ ನಡೆಯುತ್ತಿದ್ದಂತೆಯೇ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮುಸ್ತಫಾ ತನ್ನ ಮೊಬೈಲ್ ಅನ್ನು ‘ಫ್ಯಾಕ್ಟರಿ ರಿಸೆಟ್’ (Reset) ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.
ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮುಸ್ತಫಾನನ್ನು ವಶಕ್ಕೆ ಪಡೆದು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಯಿಂದಾಗಿ ಕೊಪ್ಪಳ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಅಮೆರಿಕ-ಇರಾನ್ ಮಾತುಕತೆಯ ಪ್ರಮುಖ ವಿಷಯಗಳೇನು?