Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ​;ವಿವಿಧೆಡೆ ಶುಷ್ಕ ವಾತಾವರಣ
ಕರ್ನಾಟಕ

ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ​;ವಿವಿಧೆಡೆ ಶುಷ್ಕ ವಾತಾವರಣ

Share
2 Min Read
SHARE

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶುಷ್ಕ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಕೆಲವೆಡೆ ಅಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದ್ದು, ಬಿಸಿ ಗಾಳಿ ಎಚ್ಚರಿಕೆ​ ನೀಡಲಾಗಿದೆ.

ಎಲ್ಲೆಲ್ಲಿ ಹೀಟ್​ ವೇವ್: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿಯಲ್ಲಿ 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಬಿಸಿ ಗಾಳಿಯಿಂದ ರಕ್ಷಣೆ ಹೇಗೆ?: ಹೀಟ್ ವೇವ್‌ನಿಂದ ರಕ್ಷಿಸಿಕೊಳ್ಳಲು ಜನರು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಅನಗತ್ಯವಾಗಿ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ತಪ್ಪಿಸಿಕೊಳ್ಳುವುದು ಸೂಕ್ತ. ನಿಯಮಿತವಾಗಿ ನೀರು ಕುಡಿಯಬೇಕು. ಮನೆಯಲ್ಲಿ ಎಳನೀರು, ಮಜ್ಜಿಗೆ, ಜ್ಯೂಸ್ ಮತ್ತಿತರ ತಂಪು ಪಾನೀಯ ಸೇವಿಸುವುದು ಉತ್ತಮವಾಗಿದೆ.

ಜೊತೆಗೆ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಅಗತ್ಯ ಸಂದರ್ಭದಲ್ಲಿ ಮನೆಯಿಂದ ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವಂತಹ (ಕಾಫಿ/ಟೀ) ಮತ್ತಿತರ ಕೆಫೀನ್‌ಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡುವುದು ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಈ ವರ್ಷ ಭಾರತದ ಹೆಚ್ಚಿನ ಭಾಗದಲ್ಲಿ ಸರಾಸರಿ ಅಥವಾ ಕಡಿಮೆ ತಾಪಮಾನ ದಾಖಲಾಗಲಿದೆ. ಆದರೆ ಏಪ್ರಿಲ್ ತಿಂಗಳಿನಿಂದ ಜೂನ್​ವರೆಗೆ ಪೂರ್ವ, ಈಶಾನ್ಯ ಮತ್ತು ಮಧ್ಯ ಪ್ರದೇಶಗಳು ಸರಾಸರಿಗಿಂತ ಹೆಚ್ಚಿನ ತಾಪಮಾನ ಹೊಂದಿರಲಿದ್ದು, ಹೆಚ್ಚಿನ ಬಿಸಿ ಅಲೆಗಳನ್ನು ಅನುಭವಿಸಲಿವೆ ಎಂದು ಇತ್ತೀಚೆಗೆ ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೇ, ಹವಾಮಾನ ಇಲಾಖೆಯು ಏಪ್ರಿಲ್‌ನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಬೀಳುವ ಮುನ್ಸೂಚನೆ ನೀಡಿದೆ. ಇದರಿಂದ ಋತುವಿನ ಆರಂಭದಲ್ಲಿ ಹೆಚ್ಚುತ್ತಿರುವ ಶಾಖದ ನಡುವೆ ಜನರಿಗೆ ಕೊಂಚ ಸಮಾಧಾನ ಸಿಗಲಿದೆ.

ಮಿಶ್ರ ಬೇಸಿಗೆ: ಐಎಂಡಿ ಪ್ರಕಾರ, ಏಪ್ರಿಲ್-ಜೂನ್ ಅವಧಿಯಲ್ಲಿ ಭಾರತದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಅಥವಾ ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ. ಮಧ್ಯ ಭಾರತ ಮತ್ತು ಪರ್ಯಾಯ ದ್ವೀಪದ ಕೆಲವು ಭಾಗಗಳಲ್ಲಿ ಹಗಲಿನಲ್ಲಿ ಸರಾಸರಿಗಿಂತ ಹೆಚ್ಚಿನ ತಾಪಮಾನ ಇರಲಿದೆ. ಆ ಪ್ರದೇಶಗಳಲ್ಲಿ ಹಗಲಿನ ವೇಳೆ ಹೆಚ್ಚು ತೀವ್ರವಾದ ಉಷ್ಣತೆ ಕಂಡುಬರಲಿದೆ.

ಜೊತೆಗೆ, ಭಾರತದ ಹೆಚ್ಚಿನ ಭಾಗಗಳಲ್ಲಿ ರಾತ್ರಿಗಳು ಸರಾಸರಿಗಿಂತ ಹೆಚ್ಚಿನ ತಾಪಮಾನ ಹೊಂದಿರುವ ನಿರೀಕ್ಷೆಯಿದೆ. ದೀರ್ಘಾವಧಿಯ ಶಾಖದ ಸಮಯದಲ್ಲಿ ರಾತ್ರಿ ವೇಳೆ ಅಧಿಕ ತಾಪಮಾನದಿಂದ ಜನರಿಗೆ ಅಸ್ವಸ್ಥತೆ ಮತ್ತು ಸಂಭಾವ್ಯ ಆರೋಗ್ಯದ ಅಪಾಯಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ.

TAGGED:Heatwave warning for coastal districts of the state; Dry weather in various places including Bangalore
Share This Article
Facebook Twitter Copy Link Print
Previous Article ಕೊಪ್ಪಳದಲ್ಲೂ ಲವ್ ಜಿಹಾದ್: ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ
Next Article ವನ್ಯಜೀವಿಗಳ ಸಂತಾನ ಶಕ್ತಿ ಹರಣ ಸಾಧ್ಯವಿಲ್ಲವೆಂದ ವನ್ಯಜೀವಿ ತಜ್ಞ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?