https://youtube.com/shorts/j_XhOSnjPZw?si=vBzrpGhQDFbuiw_E
newsics.com
ಬೆಂಗಳೂರು : ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನ ಕಂಡು ಸ್ಥಳಕ್ಕೆ ದಾವಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತೆರಳುತ್ತಿದ್ದರು, ಅಪಘಾತ ಕಂಡು ತಕ್ಷಣ ಓಡೋಡಿ ಬಂದು ಸಹಾಯ ಮಾಡಿದ್ದಾರೆ.
ಇನ್ನು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನ ಅರ್ಧ ಗಂಟೆಯಿಂದ ಯಾರು ಗಮನಿಸದೆ ರಸ್ತೆಯಲ್ಲಿಯೇ ನರಳಾಡ್ತಿರೋದನ್ನ ನೋಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.