Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್‌; ಯುವಕನ ಲಿಂಗ ಬದಲಾವಣೆಗೂ ಯತ್ನ
ಕರ್ನಾಟಕಪ್ರಮುಖ

ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್‌; ಯುವಕನ ಲಿಂಗ ಬದಲಾವಣೆಗೂ ಯತ್ನ

Share
2 Min Read
SHARE

ಮೈಸೂರು: ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ ಸೆಕ್ಸ್‌ವರ್ಕ್, ರೀಲ್ಸ್‌ಗಳಲ್ಲಿ ಬಳಸಿ, ಲಕ್ಷಾಂತರ ಹಣ ಗಳಿಸಿದಲ್ಲೆ, ಆತನಿಗೆ ಬಲವಂತವಾಗಿ ಲಿಂಗ ಬದಲಾವಣೆಗೆ ನಡೆಸಿದ ಹುನ್ನಾರ ನಡೆಸಿದ ಘಟನೆ ನಡೆದಿದೆ. ಇದರಿಂದ ಬೇಸತ್ತು ಖದೀಮರ ಕಪಿಮುಷ್ಠಿಯಿಂದ ಹೊರಬಂದ ಯುವಕನಿಗೆ ವಾಪಸ್ ದಂಧೆಗೆ ಬರುವಂತೆ ಮಾನಸಿಕವಾಗಿ ಕಿರುಕುಳ ನೀಡುತ್ತಿರುವ ಅಘಾತಕಾರಿ ಪ್ರಕರಣಮೊಂದು ಬೆಳಕಿಗೆ ಬಂದಿದೆ.
ಮಂಗಳಮುಖಿಯ ಕಿರುಕುಳಕ್ಕೆ ಬೇಸತ್ತ ಯುವಕ ಇದೀಗ ನ್ಯಾಯಕ್ಕಾಗಿ ಮೈಸೂರು ಪೊಲೀಸರ ಮೊರೆ ಹೋಗಿದ್ದಾನೆ. ಮತ್ತೆ ಕರಾಳ ದಂಧೆಗೆ ತೊಡಗಿಸಲು ಹುನ್ನಾರ ನಡೆಸುತ್ತಿರುವ ಮಂಗಳಮುಖಿ ವಿರುದ್ದ ಯುವಕ ಮೈಸೂರಿನ ಲಷ್ಕರ್ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾನೆ.
ನಂಜನಗೂಡಿನ ತ್ಯಾಗರಾಜ ಕಾಲೋನಿಯ ಯುವಕ ಅನಿಲ್ ಕುಮಾರ್ ಅಕ್ಷತಾ ನೊಂದ ಯುವಕ. ಮಂಗಳೂರು ಮೂಲದ ಅನಿತಾ ಆರೋಪ ಹೊತ್ತ ಮಂಗಳಮುಖಿ.
ನಾಲ್ಕು ತಿಂಗಳ ಹಿಂದೆ ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಅನಿಲ್ ಕುಮಾರ್ ಬಸ್‌ಗಾಗಿ ಕಾಯುತ್ತಿದ್ದಾಗ ಮಂಗಳಮುಖಿ ಅನಿತಾ ಮತ್ತು ತಂಡ ಅನಿಲ್ ಕುಮಾರ್‌ಗೆ ಮುಸುಕು ಹಾಕಿ ಮತ್ತು ಬರುವಂತೆ ಮಾಡಿ, ಬಲವಂತವಾಗಿ ಕಿಡ್ನಾಪ್ ಮಾಡಿ, ಮಂಗಳೂರಿಗೆ ಕರೆದೊಯ್ದಿದ್ದಾರೆ. ಬಳಿಕ ಆತನಿಗೆ ಸೀರೆ, ನೈಟಿ, ಕಿವಿಗೆ ಓಲೆ, ಮೂಗಿಗೆ ಬಟ್ಟು ಹಾಕಿಸಿದ್ದಾರೆ. ಮಂಗಳಮುಖಿಯಾಗಿ ವೇಷ ಹಾಕಿಸಿ ಬಲವಂತವಾಗಿ ಬೀದಿಗಳಲ್ಲಿ ಅಂಗಡಿಗಳ ಮುಂದೆ ಕಲೆಕ್ಷನ್ ಮಾಡಿಸಿದ್ದಾರೆ. ಪ್ರತಿದಿನ 2 ರಿಂದ 3 ಸಾವಿರ ಕಲೆಕ್ಷನ್ ಮಾಡಿಸಿದ್ದಾರೆ. ರೀಲ್ಸ್‌ಗಳನ್ನ ತಯಾರಿಸಿ ಸಾಮಾಜಿಕ ಜಾಲತಾಣದಲ್ಲೂ ಅಪ್ ಲೋಡ್ ಮಾಡಿದ್ದಾರೆ. ಅಲ್ಲದೆ ಮಂಗಳೂರು, ಕೇರಳ ‘ರಾಜ್ಯ ಗಳಿಗೆ ಕಳಿಸಿ ಸೆಕ್ಸ್‌ವರ್ಕ್ ಗೂ ಬಳಸಿದ್ದಾರೆ.ಇದರಲ್ಲೂ ಅನಿಲ್ ಕುಮಾರ್ ಅಕ್ಷತಾರಿಂದ ಸಾವಿರಾರು ರೂ. ಹಣ ವಸೂಲಿಯಾಗಿದೆ. ನಂತರ ಆಧಾರ ಕಾರ್ಡ್ ನಲ್ಲಿ ಟ್ರಾನ್ಸ್ಜೆಂಡರ್ ಎಂದು ನಮೂದಿಸಿ, ಸಮಾಜ ಕಲ್ಯಾಣ ಇಲಾಖೆಯಿಂದ ಸಹ ಅಧಿಕೃತ ಸರ್ಟಿಫಿಕೇಟ್ ಕೊಡಿಸಿದ್ದಾರೆ. ಮುಂದಿನ ತಿಂಗಳು ಬಾಂಬೆಗೆ ಕರೆದೊಯ್ದು ಶಸ್ತ್ರಚಿಕಿತ್ಸೆ ಮೂಲಕ ಶಾಶ್ವತವಾಗಿ ಮಂಗಳಮುಖಿಯಾಗಿ ಕನ್ವರ್ಟ್ ಮಾಡಲು ಸ್ಕೆಚ್ ಹಾಕುತ್ತಿದ್ದ ಮಾಹಿತಿ ಅರಿತ ಅನಿಲ್ ಕುಮಾರ್ ಕರಾಳ ದಂದೆಯ ಕಪಿಮುಷ್ಠಿಯಿಂದ ಹೊರಬರಲು ನಿರ್ಧರಿಸಿ ತನ್ನ ಸಂಪಾದನೆಯಲ್ಲಿ 3 ಲಕ್ಷ ಕೊಡುವಂತೆ ಕೇಳಿದಾಗ ಅನಿತಾ ಉಲ್ಟಾ ಹೊಡೆದಿದ್ದಾರೆ. ತನ್ನ ಮನೆಯಿಂದ 5 ಲಕ್ಷ ನಗದು ಚಿನ್ನಾಭರಣ ಕಳ್ಳತನ ಮಾಡಿರುವುದಾಗಿ ಸುಳ್ಳು ಕಂಪ್ಲೇಂಟ್ ದಾಖಲಿಸಿ, ಜೈಲಿಗೆ ಹಾಕಿಸುತ್ತೇನೆಂದು ಅನಿತಾ ಬೆದರಿಸಿದ್ದಾರೆ. ಮನನೊಂದ ಅನಿಲ್ ಕುಮಾರ್ ದಾಖಲೆಗಳು ಸರ್ಟಿಫಿಕೇಟ್ ಸಮೇತ ಮಂಗಳೂರು ತೊರೆದು ನಂಜನಗೂಡು ಸೇರಿಕೊಂಡಿದ್ದಾನೆ. ಮತ್ತೆ ದಂಧೆ ಮಾಡಿಸಲು ಹವಣಿಸಿದ ಅನಿತಾ ಮಂಗಳಮುಖಿಯರನ್ನ ಅನಿಲ್ ಕುಮಾರ್ ಮನೆಗೆ ಕಳಿಸಿ ಗಲಾಟೆ ಮಾಡಿಸಿದ್ದಾರೆ. ಆಗಾಗ ಅನಿತಾ ತನಗೆ ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದಾರೆ. ದಂಧೆಗೆ ಹಿಂದಿರುಗುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಅನಿಲ್ ಕುಮಾರ್ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಂಜನಗೂಡು ಪೊಲೀಸರು ತನ್ನ ಮನವಿಗೆ ಸ್ಪಂದಿಸುತ್ತಿಲ್ಲವೆಂದು ಸಹ ಆರೋಪಿಸಿದ್ದಾರೆ.

ಸಣ್ಣ-ಸಣ್ಣ ವಿಚಾರಕ್ಕೂ ಹೆಚ್ಚು ಯೋಚ್ನೆ ಮಾಡ್ತಿದ್ದೀರಾ!? ಹಾಗಿದ್ರೆ ಎಚ್ಚರವಹಿಸಿ

TAGGED:collection-by-forcing-a-young-man-to-dress-up-as-a-mars-faced-man-attempt-to-change-his-gender
Share This Article
Facebook Twitter Copy Link Print
Previous Article ಸಣ್ಣ-ಸಣ್ಣ ವಿಚಾರಕ್ಕೂ ಹೆಚ್ಚು ಯೋಚ್ನೆ ಮಾಡ್ತಿದ್ದೀರಾ!? ಹಾಗಿದ್ರೆ ಎಚ್ಚರವಹಿಸಿ
Next Article ಸಾತಾರಾ ರಸ್ತೆ ಅಪಘಾತ: ಬೆಳಗಾವಿಯ ನಾಲ್ವರು ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?