newsics.com
ನವದೆಹಲಿ: ರಾಷ್ಟ್ರ ಮಾಲಿನ್ಯ ಸಮಸ್ಯೆಯಿಂದ ಮುಕ್ತಗೊಳಿಸಲು ದೆಹಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು,ಮುಂದಿನ ವರ್ಷದಿಂದ ಎಲೆಕ್ಟ್ರಿಕ್ ವಾಹನಗಳ ನೋಂದಣಿಗೆ ಮಾತ್ರ ಅವಕಾಶ ನೀಡುವುದಾಗಿ ಘೋಷಿಸಿದೆ.
ಎಲೆಕ್ಟ್ರಿಕ್ ವಾಹನ ನೀತಿ 2026 -2030 ಕರಡನ್ನು ದೆಹಲಿ ಸರ್ಕಾರ ಬಿಡುಗಡೆ ಮಾಡಿದ್ದು, ಹೊಸ ರೀತಿಯ ಪ್ರಕಾರ, 2027ರ ಜನವರಿಯಿಂದ ಹೊಸದಾಗಿ ನೋಂದಣಿಯಾಗುವ ಎಲ್ಲಾ ತ್ರಿಚಕ್ರ ವಾಹನಗಳು ಕೇವಲ ಎಲೆಕ್ಟ್ರಿಕ್ ಆಗಿರಬೇಕು. 2028ರ ಏಪ್ರಿಲ್ 1ರಿಂದ ಎಲೆಕ್ಟ್ರಿಕ್ ಮಾದರಿ ದ್ವಿಚಕ್ರ ವಾಹನಗಳ ನೋಂದಣಿಗೆ ಮಾತ್ರ ಅವಕಾಶ ನೀಡಲಾಗುವುದು.
ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿ ಸಾಮರ್ಥ್ಯದ ಆಧಾರದ ಮೇಲೆ 2.25 ಲಕ್ಷ ರೂಪಾಯಿವರೆಗೂ ಸಬ್ಸಿಡಿ ನೀಡಲಾಗುವುದು. ಎಲೆಕ್ಟ್ರಿಕ್ ವಾಹನ ಖರೀದಿಗೆ ಪ್ರೋತ್ಸಾಹ ನೀಡಲು ಚಾರ್ಜಿಂಗ್ ಸೌಕರ್ಯಗಳನ್ನು ವಿಸ್ತರಿಸಲು ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.