Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರವಾಸಿ ಶ್ರೀನಂದಾ ಸಾವಿಗೆ ಕಾರಣವೇನು? ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ
ಕರ್ನಾಟಕದೇಶಪ್ರಮುಖ

ಪ್ರವಾಸಿ ಶ್ರೀನಂದಾ ಸಾವಿಗೆ ಕಾರಣವೇನು? ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ

Share
1 Min Read
SHARE

newsics.com

ಚಂದ್ರದ್ರೋಣ ಪರ್ವತಶ್ರೇಣಿಯ ಸಮೀಪದ ಮಾಣಿಕ್ಯಧಾರಾ ಜಲಪಾತ ಪಕ್ಕದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆಯಾದ ಕೇರಳ ಮೂಲದ ವಿದ್ಯಾರ್ಥಿನಿ ಶ್ರೀನಂದಾ (15) ಸಾವಿನ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.ಪ್ರಪಾತಕ್ಕೆ ಬಿದ್ದು ಸಾವಿಗೀಡಾಗಿದ್ದಾಳೆ ಎಂದು ಪೊಲೀಸ್​​ ಮೂಲಗಳು ತಿಳಿಸಿದರು ಕೂಡ ಶ್ರೀನಂದಾ ಪಾಲಕರು ಮಾತ್ರ ಆಕೆಯ ಸಾವಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಆರಂಭಿಕ ಮರಣತ್ತೋರ ವರದಿ ಹೊರಬಿದ್ದಿದೆ.

ಶ್ರೀನಂದಾ ಸಾವಿನಲ್ಲಿ ಯಾವುದೇ ಅಸಹಜತೆ ಇಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿಯಿಂದ ತಿಳಿದುಬಂದಿದೆ.

ವರದಿಯ ಪ್ರಕಾರ, ತಲೆಯ ಬಲಭಾಗಕ್ಕೆ ಗಂಭೀರವಾದ ಗಾಯವಾಗಿರುವುದೇ ಸಾವಿಗೆ ಕಾರಣ ಎಂದು ಉಲ್ಲೇಖಿಸಲಾಗಿದೆ.

ಶ್ರೀನಂದಾ ಅವರ ದೇಹದಾದ್ಯಂತ ಗಾಯಗಳು ಪತ್ತೆಯಾಗಿದ್ದು, ಹಲವು ಸ್ಥಳಗಳಲ್ಲಿ ಮೂಳೆಗಳು ಮುರಿದಿದ್ದು, ಇದೆಲ್ಲವೂ ಮೇಲಿಂದ ಬಿದ್ದಿರುವುದರಿಂದ ಸಂಭವಿಸಿವೆ ಎಂದು ಮರಣೋತ್ತರ ವರದಿ ಹೇಳಿದೆ.

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಎರಡು ಶಸ್ತ್ರಚಿಕಿತ್ಸಕರ ತಂಡದಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ದಾಖಲಿಸಲಾಗಿದೆ. ಈ ಪರೀಕ್ಷೆಯನ್ನು ವೈದ್ಯರಾದ ಲೋಹಿತ್ ಮತ್ತು ಜಯಲಕ್ಷ್ಮಿ ನಡೆಸಿದ್ದಾರೆ.

ತನಿಖೆಯ ವೇಳೆ, ಕಾಣೆಯಾಗುವ ಮೊದಲು ಶ್ರೀನಂದಾ ಸುಮಾರು 17 ನಿಮಿಷಗಳ ಕಾಲ ಫೋನ್‌ನಲ್ಲಿ ಮಾತನಾಡಿದ್ದಾಳೆಂದು ತಿಳಿದುಬಂದಿದೆ. ಅದರಲ್ಲಿ 15 ನಿಮಿಷಗಳ ಕಾಲ ಸ್ನೇಹಿತೆಯೊಬ್ಬರೊಂದಿಗೆ ಮಾತುಕತೆ ನಡೆದಿದ್ದು, ಈ ವೇಳೆ ನಡೆದಿರುವ ಚರ್ಚೆ ಅಥವಾ ಮನಸ್ತಾಪವೇ ಸಾವಿಗೆ ಕಾರಣವಾಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ.

https://www.newsics.com/2026/04/13/devotees-decorate-moving-train-like-a-temple-watch-viral-video/

TAGGED:What was the cause of the death of tourist Srinanda?
Share This Article
Facebook Twitter Copy Link Print
Previous Article ಚಲಿಸುವ ರೈಲನ್ನು ದೇವಸ್ಥಾನದಂತೆ ಅಲಂಕರಿಸಿದ ಭಕ್ತರು; ವೈರಲ್ ವಿಡಿಯೋ ನೋಡಿ
Next Article ಚಾನೆಲ್​ನಲ್ಲಿ ಗಾಯಕಿ ಆಶಾ ಭೋಸ್ಲೆ ನಿಧನದ ಸುದ್ದಿ ಹಾಕುವಂತಿಲ್ಲ ಎಂದು ನಿರ್ಬಂಧ ವಿಧಿಸಿದ ಪಾಕಿಸ್ತಾನ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?