newsics.com
ವಿಜಯಪುರ: ತಾನು ಪ್ರೀತಿಸಿದ್ದ ಯುವತಿಗೆ ಮತ್ತೊಬ್ಬನ ಜೊತೆ ವಿವಾಹ ನಿಶ್ಚಯವಾಗಿದ್ದಕ್ಕೆ ರೊಚ್ಚಿಗೆದ್ದ ಯುವಕ ಮಾಡಿದ ಕೆಲಸದಿಂದ ಯುವತಿ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ 22 ವರ್ಷದ ಯುವತಿ ಜಯಶ್ರೀ ಬಿರಾದಾರ್ಗೆ ಮದುವೆ ಮಾಡಲು ಮುಂದಾಗಿದ್ದ ಕುಟುಂಬಸ್ಥರು, ಈ ಸಂಬಂಧ ನಿಶ್ಚಿತಾರ್ಥವನ್ನೂ ನಡೆಸಿದ್ದರು. ಆದರೆ ಜಯಶ್ರೀ ಈ ಮೊದಲು ಶ್ರೀಶೈಲ್ ಬಡಾನೂರ್ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದ್ದು, ಈಕೆಯ ವಿವಾಹದ ವಿಷಯ ತಿಳಿದ ಆತ ವ್ಯತಿರಿಕ್ತವಾಗಿ ವರ್ತಿಸಿದ್ದಾನೆ.
ಜಯಶ್ರೀ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನ ಕುಟುಂಬಸ್ಥರಿಗೆ ಆಕೆ ತನ್ನ ಜೊತೆಗಿರುವ ಫೋಟೋಗಳನ್ನು ಶ್ರೀಶೈಲ್ ಕಳುಹಿಸಿದ್ದಾನೆ. ಅವನ್ನು ನೋಡಿರುವ ಯುವಕನ ಕಡೆಯವರು ಏಪ್ರಿಲ್ 27ರಂದು ನಿಗದಿಯಾಗಿದ್ದ ಮದುವೆಯನ್ನು ಕ್ಯಾನ್ಸಲ್ ಮಾಡಿದ್ದಾರೆ. ಘಟನೆಯಿಂದ ತೀವ್ರವಾಗಿ ನೊಂದ ಜಯಶ್ರೀ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಘಟನೆ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
https://www.newsics.com/2026/04/14/pay-and-park-implementation-on-42-major-roads-of-the-city/