Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CBSE ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ
ಕರ್ನಾಟಕದೇಶಪ್ರಮುಖ

CBSE ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ

Share
2 Min Read
SHARE

 

newsics.com

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್‌ಇ 10ನೇ ತರಗತಿಯ 2026ರ ಫಲಿತಾಂಶಗಳನ್ನು ಏಪ್ರಿಲ್ 15ರ ಸಂಜೆ 4 ಗಂಟೆಗೆ ಪ್ರಕಟಿಸಿದೆ.

ಈ ಬಾರಿ ಶೇ 93.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷದ ಶೇ 93.66 ಕ್ಕೆ ಹೋಲಿಸಿದರೆ ಶೇ 0.04ರಷ್ಟು ಹೆಚ್ಚಳವಾಗಿದೆ.

ಸುಮಾರು 16.3 ಮಿಲಿಯನ್ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ದಾಖಲೆ ಸಮಯದಲ್ಲಿ ಸಿಬಿಎಸ್​ಸಿ ಪೂರ್ಣಗೊಳಿಸಿದೆ. ಸಾಮಾನ್ಯವಾಗಿ ಮೇ ಮಧ್ಯದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ. ಆದರೆ, ಈ ಬಾರಿ ಏಪ್ರಿಲ್​ ನಲ್ಲಿ ಫಲಿತಾಂಶ ಘೋಷಣೆ ಮಾಡಲಾಗಿದೆ.

ದ್ವಿ ಪರೀಕ್ಷಾ ವ್ಯವಸ್ಥೆ, ಪಾರದರ್ಶಕ ಮೌಲ್ಯಮಾಪನ ಪ್ರಕ್ರಿಯೆ ಮತ್ತು ಹೊಸ ಶಿಕ್ಷಣ ನೀತಿ (NEP) ಅಡಿಯಲ್ಲಿ ಜಾರಿಗೆ ತರಲಾದ ತಾಂತ್ರಿಕ ಸುಧಾರಣೆಗಳು ಈ ವರ್ಷದ ಫಲಿತಾಂಶಗಳನ್ನು ಅಸಾಧಾರಣವಾಗಿಸಿದೆ ಎಂದು ಮಂಡಳಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಬಾಲಕಿಯರೇ ಮೇಲುಗೈ: ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಎಂದಿನಂತ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ. 93.70 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಶೇ. 94.99 ರಷ್ಟು ಬಾಲಕಿಯರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹುಡುಗರ ಉತ್ತೀರ್ಣದ ಶೇಕಡಾವಾರಿಗಿಂತ ಶೇ. 1.3 ರಷ್ಟು ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 55,368 ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಮತ್ತು 2,21,574 ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಾರಿ 8,074 ಕೇಂದ್ರಗಳಲ್ಲಿ ನಡೆದ ಪರೀಕ್ಷೆಗೆ 24.71 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು.

ಫಲಿತಾಂಶ ತಿಳಿಯಲು ಈ ಸೈಟ್​​ಗಳಿಗೆ ಭೇಟಿ ನೀಡಿ: ವಿದ್ಯಾರ್ಥಿಗಳು ಸಿಬಿಎಸ್‌ಇ ವೆಬ್‌ಸೈಟ್ https://results.cbse.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಅವರು cbse.gov.in ಮತ್ತು digilocker (www.digilocker.gov.in) ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಡೌನ್‌ಲೋಡ್ ಮಾಡಬಹುದು.

ಸಿಬಿಎಸ್‌ಇ ತನ್ನ ವೆಬ್‌ಸೈಟ್‌ನಲ್ಲಿ ಮೂರು ಲಿಂಕ್‌ಗಳನ್ನು ಬಿಡುಗಡೆ ಮಾಡಿದೆ, ಅಲ್ಲಿ ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆ, ಶಾಲಾ ಸಂಖ್ಯೆ, ಜನ್ಮ ದಿನಾಂಕ ಮತ್ತು ಪ್ರವೇಶ ಕಾರ್ಡ್ ಸಂಖ್ಯೆಯನ್ನು ನಮೂದಿಸುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಫಲಿತಾಂಶಗಳನ್ನು ಇಲ್ಲಿ ಪರಿಶೀಲಿಸಿ

https://cbseresults.nic.in/

https://www.cbse.gov.in/

https://www.digilocker.gov.in/

 

ಮತ್ತೊಂದು ಲವ್ ಜಿಹಾದ್ ಪ್ರಕರಣ : 180 ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ, 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

ʼʼಫಸ್ಟ್‌ ನೈಟ್‌ ಆಗಬೇಕಂದ್ರೆ 90 ಲಕ್ಷ ರುಪಾಯಿ ಕೊಡಿʼʼ; ಪತಿ ಬಳಿ ಡಿಮ್ಯಾಂಡ್‌ ಇಟ್ಟ ಪತ್ನಿ

TAGGED:CBSE results declared: Girls dominate
Share This Article
Facebook Twitter Copy Link Print
Previous Article ಆದಿಚುಂಚನಗಿರಿ ಮಠದಲ್ಲಿ 9 ಸಂಕಲ್ಪಗಳನ್ನು ಕೈಗೊಳ್ಳುವಂತೆ ಮೋದಿ ಕರೆ
Next Article ಬಿಂದಿ, ಸಿಂಧೂರಕ್ಕೆ ನಿರ್ಬಂಧ, ಹಿಜಾಬ್‌ಗೆ ಅನುಮತಿ; ಏನಿದು ಲೆನ್ಸ್‌ಕಾರ್ಟ್ ಹೊಸ ನಿಯಮ?

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?