Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ.!
ಕರ್ನಾಟಕಪ್ರಮುಖ

ಶಾಸಕ ವಿನಯ್ ಕುಲಕರ್ಣಿ ಸೇರಿ 17 ಅಪರಾಧಿಗಳಿಗೆ ನಾಳೆ ಶಿಕ್ಷೆ ಪ್ರಮಾಣ ಪ್ರಕಟ.!

Share
2 Min Read
SHARE

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಶಿಕ್ಷೆ ಪ್ರಮಾಣ ನಾಳೆ ಪ್ರಕಟವಾಗಲಿದೆ.

ಏಪ್ರಿಲ್ 15 ರಂದು ನಡೆದ ವಿಚಾರಣೆಯಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 19 ಜನರನ್ನು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿತ್ತು.ಇಂದು ವಾದ ವಿವಾದ ಆಲಿಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ನಾಳೆಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ವಿಚಾರಣೆಯಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿಯನ್ನು ದೋಷಿಗಳೆಂದು ಘೋಷಿಸಿದ್ದ ನ್ಯಾಯಾಲಯ, ಇಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಬೇಕಿತ್ತು. ಆದರೆ ನಾಳೆಗೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಏ.9ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು. ತಾಂತ್ರಿಕ ಕಾರಣಗಳು ಹಾಗೂ ತೀರ್ಪು ಸಿದ್ಧಪಡಿಸುವ ಪ್ರಕ್ರಿಯೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಏ.15ಕ್ಕೆ ಮೂಂದೂಡಿತ್ತು. ನಿನ್ನೆ ನ್ಯಾಯಾಲಯ ಆರೋಪಿಗಳಾದ ಶಾಸಕ ವಿನಯ್ ಕುಲಕರ್ಣಿ ಸೇರಿ 19 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ

ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಅವರನ್ನು 2016ರ ಜೂ.15ರಂದು ಧಾರವಡದ ಉದಯ ಜಿಮ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದರು. ಈ ಸಂಬಂಧ ಧಾರವಾಡದ ಉಪನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದರು. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಕೊಲೆಯಾದ ಯೋಗೀಶ್ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು. ಈ ಕೊಲೆಯಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಕೈವಾಡವಿರುವ ಶಂಕೆ ಹಿನ್ನೆಲೆಯಲ್ಲಿ 2020ರ ನ.5ರಂದು ಸಿಬಿಐ ಅಧಿಕಾರಿಗಳು ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

ಶಾಸಕ ಸ್ಥಾನಕ್ಕೆ ಕುತ್ತು?
ಕಾನೂನಿನ ಪ್ರಕಾರ, ಯಾವುದೇ ಶಾಸಕರಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆ ಪ್ರಕಟವಾದರೆ, ಅವರು ತಕ್ಷಣವೇ ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ.

ಪತ್ನಿಗೆ ತಾಯಿಯಾಗುವ ಹಂಬಲವಿದ್ದರೆ, ಕೋಮಾದಲ್ಲಿರುವ ಗಂಡನಿಂದಲೂ ವೀರ್ಯ ಪಡೆಯಬಹುದು

TAGGED:Yogesh Gowda murder case: MLA Vinay Kulkarni along with 17 criminals will be sentenced tomorrow!
Share This Article
Facebook Twitter Copy Link Print
Previous Article ಪತ್ನಿಗೆ ತಾಯಿಯಾಗುವ ಹಂಬಲವಿದ್ದರೆ, ಕೋಮಾದಲ್ಲಿರುವ ಗಂಡನಿಂದಲೂ ವೀರ್ಯ ಪಡೆಯಬಹುದು
Next Article ಡೇಟಿಂಗ್ ಆ್ಯಪ್‌ ಮೂಲಕ ಕೋಟಿ ಕೋಟಿ ಹಣ ಲೂಟಿ ಮಾಡಿದ್ದ ವಂಚಕ ಅರೆಸ್ಟ್

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?