Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಣೆಯಾಗಿದ್ದ ಮಹಿಳೆಯ ತಲೆ ಬುರುಡೆ ಪತ್ತೆ : ಅಕ್ರಮ ಸಂಬಂಧವೇ ಕೃತ್ಯಕ್ಕೆ ಕಾರಣನಾ?
ಕರ್ನಾಟಕಪ್ರಮುಖ

ಕಾಣೆಯಾಗಿದ್ದ ಮಹಿಳೆಯ ತಲೆ ಬುರುಡೆ ಪತ್ತೆ : ಅಕ್ರಮ ಸಂಬಂಧವೇ ಕೃತ್ಯಕ್ಕೆ ಕಾರಣನಾ?

Share
1 Min Read
SHARE

https://youtube.com/shorts/EOt-aJYYg5k?si=DmDCY_9WwqDDfAlH

newsics.com

ನೆಲಮಂಗಲ: ಅಡಿಕೆ ತೋಟದ ಪಕ್ಕದಲ್ಲಿ ಮಹಿಳೆಯ ತಲೆ ಬುರುಡೆ, ಕೈ-ಕಾಲುಗಳ ಕೆಲ ಮೂಳೆಗಳು  ಪತ್ತೆಯಾದ ಘಟನೆ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಹಳೇ ನಿಜಗಲ್‌ನಲ್ಲಿ ಗ್ರಾಮದಲ್ಲಿ ನಡೆದಿದೆ.

ಯಮುನಾ (35) ಮೃತ ಮಹಿಳೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದರು. ಸದ್ಯ ಇವರ ಅಸ್ಥಿಪಂಜರ ಪತ್ತೆಯಾಗಿದೆ. ಅಕ್ರಮ ಸಂಬಂಧದ ಹಿನ್ನೆಲೆ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಮೃತ ಮಹಿಳೆ ಯಮುನಾ ತುಮಕೂರು ನಿವಾಸಿ. 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ್ ಎಂಬುವವರನ್ನು ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಎಂಟು ವರ್ಷಗಳ ಹಿಂದೆ ರಾಘವೇಂದ್ರ ಎಂಬಾತನ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದ ಯಮುನಾ, ಪತಿಯನ್ನು ಬಿಟ್ಟು ಐದು ವರ್ಷಗಳ ಕಾಲ ಆತನೊಂದಿಗೆ ದೊಡ್ಡಬಳ್ಳಾಪುರದಲ್ಲಿ ವಾಸವಿದ್ದರು.

ತನ್ನ ತಪ್ಪಿನ ಅರಿವಾಗಿ ಎರಡು ವರ್ಷಗಳ ಹಿಂದೆ ಯಮುನಾ ಮರಳಿ ಪತಿಯ ಮನೆಗೆ ಬಂದು ಜೀವನ ನಡೆಸುತ್ತಿದ್ದರು. ಆದರೆ, ಕಳೆದ ಮಾರ್ಚ್ 21ರಂದು ಯಮುನಾ ಹುಟ್ಟುಹಬ್ಬ ಇತ್ತು. ಹೀಗಾಗಿ ಭೇಟಿ ಮಾಡುವಂತೆ ರಾಘವೇಂದ್ರ ಒತ್ತಾಯಿಸಿದ್ದ. ಕೆಲಸ ಮುಗಿಸಿ ಆತನನ್ನು ಭೇಟಿ ಮಾಡಲು ಹೋದ ಯಮುನಾ ಅಂದಿನಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ತುಮಕೂರು ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು.

ಹಳೇ ನಿಜಗಲ್ ಗ್ರಾಮದ ಅಡಿಕೆ ತೋಟದ ಪಕ್ಕದಲ್ಲಿ ತಲೆಬುರುಡೆ ಹಾಗೂ ಕೈಕಾಲುಗಳ ಮೂಳೆಗಳು ಪತ್ತೆಯಾಗಿವೆ. ಮೂಳೆಗಳ ಪಕ್ಕದಲ್ಲೇ ಮಹಿಳೆಯ ಬ್ಯಾಗ್ ಹಾಗೂ ಐಡಿ ಕಾರ್ಡ್ ಸಿಕ್ಕಿದ್ದರಿಂದ, ಯಮುನಾ ಎಂದು ಗುರುತಿಸಲಾಗಿದೆ.

ರಾಘವೇಂದ್ರ ಎಂಬಾತನೇ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಅಡಿಕೆ ತೋಟದ ಬಳಿ ಎಸೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

https://www.newsics.com/2026/04/17/number-of-lok-sabha-seats-in-karnataka-increased-from-28-to-42-due-to-delimitation-amit-shah-announces/

TAGGED:Missing woman's skull found
Share This Article
Facebook Twitter Copy Link Print
Previous Article ಕ್ಷೇತ್ರ ಪುನರ್‌ವಿಂಗಡಣೆಯಿಂದ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ : ಅಮಿತ್ ಶಾ ಘೋಷಣೆ
Next Article ಇಸ್ರೇಲ್-ಲೆಬನಾನ್ ಮಾತುಕತೆ: 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?