https://youtube.com/shorts/EOt-aJYYg5k?si=DmDCY_9WwqDDfAlH
newsics.com
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಅವರು, ತಮ್ಮ ಪುತ್ರ ಅಶುತೋಷ್ ಹೆಗಡೆ ವಿದೇಶದಲ್ಲಿ ವ್ಯಾಸಂಗ ಮಾಡಲು ಪಾಸ್‌ಪೋರ್ಟ್ ಸಮಸ್ಯೆ ಎದುರಿಸುತ್ತಿರುವ ಕಾರಣ, ದಾಬಸ್‌ಪೇಟೆ ಠಾಣೆಯಲ್ಲಿ ದಾಖಲಾಗಿರುವ ಹಲ್ಲೆ ಪ್ರಕರಣದಿಂದ ಅವರ ಹೆಸರನ್ನು ಕೈಬಿಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ಪುತ್ರನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅನಂತಕುಮಾರ್ ಹೆಗಡೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು.
ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಮಾಜಿ ಸಂಸದ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿ ಇಂದು (ಏಪ್ರಿಲ್ 16) ಆದೇಶ ಹೊರಡಿಸಿದೆ.
ದಾಬಸ್‌ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ನಲ್ಲಿ ಅಶುತೋಷ್ ಹೆಸರಿಲ್ಲದಿದ್ದರೂ ದೋಷಾರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವುದರಿಂದ ಪಾಸ್ಪೋರ್ಟ್ಗೆ ಸಮಸ್ಯೆಯಾಗಲಿದೆ.
ಕುಟುಂಬದ ಹಿರಿಯರನ್ನು ನೋಡಲು ವಿದೇಶದಿಂದ ಬಂದಿದ್ದಾಗ ಘಟನೆ ನಡೆದಿದೆ. ಘಟನೆಯಲ್ಲಿ ಅಶುತೋಷ್ ಪಾತ್ರವಿಲ್ಲವೆಂದು ವಕೀಲ ಪವನ್ ಚಂದ್ರ ಶೆಟ್ಟಿ ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಇದರಿಂದ ಅನಂತಕುಮಾರ ಹೆಗಡೆ ಪುತ್ರ ಅಶುತೋಷ್ಗೆ ಮಧ್ಯಂತರ ರಿಲೀಫ್ ಸಿಕ್ಕಂತಾಗಿದೆ.
https://www.newsics.com/2026/04/17/israel-lebanon-talks-trump-announces-10-day-ceasefire/