newsics.com
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ.
ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ. 2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. ಹೀಗಾಗಿ 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.
2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ, ಇನ್ನೊಂದು ವರ್ಷ ಅಂದರೆ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ.
ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಅಧಿಕಾರಾವಧಿ ಕನಿಷ್ಠ 2 ವರ್ಷಗಳಿರಬೇಕು ಎಂದು ಆದೇಶಿಸಿತ್ತು. ಆದರೆ ಡಿಜಿ-ಐಜಿ ಹುದ್ದೆಗೆ ನೇಮಕಗೊಳ್ಳುವ ಐಪಿಎಸ್ ಅಧಿಕಾರಿ ನಿವೃತ್ತಿಗೆ ಕನಿಷ್ಠ 6 ತಿಂಗಳಿಗಿಂತ ಹೆಚ್ಚಿನ ಸೇವಾವಧಿ ಇದ್ದರೆ ಪರಿಗಣಿಸಬಹುದು ಎಂಬ ನಿಯಮ ರೂಪಿಸಿತ್ತು. ಈ ನ್ಯಾಯಾಲಯದ ಆದೇಶದನ್ವಯ ಸಲೀಂ ಅವರಿಗೆ ಅಧಿಕಾರಾವಧಿ ವಿಸ್ತರಣೆಯಾಗಿದೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದು, ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.
https://www.newsics.com/2026/04/17/el-nino-threat-extreme-temperatures/