Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು
ಕರ್ನಾಟಕಪ್ರಮುಖ

ಮುಸ್ಲಿಂ ನಾಯಕರ ಬೆನ್ನಿಗೆ ನಿಂತ ಸತೀಶ್ ಜಾರಕಿಹೊಳಿ, ಡಿಕೆಶಿ ಭೇಟಿಯ ಗುಟ್ಟು ರಟ್ಟು

Share
2 Min Read
SHARE

ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಿರುವ ಬಗ್ಗೆ ಬೇಸರಗೊಂಡಿರುವ ಸತೀಶ್ ಜಾರಕಿಹೊಳಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಮೊದಲೇ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಂಬಂಧ ಅಷ್ಟಕಷ್ಟೇ. ಇಬ್ಬರೂ ಒಂದೇ ಪಕ್ಷದ ನಾಯಕರಾಗಿದ್ದರೂ ಸಹ ಸತೀಶ್‌ ಜಾರಕಿಹೊಳಿ ಕರ್ನಾಟಕ ಕಾಂಗ್ರೆಸ್‌ನ ಕೇಂದ್ರವಾಗಿದ್ದರೆ, ಡಿಕೆ ಶಿವಕುಮಾರ್ ಸಹ ಮತ್ತೊಂದು ಕೇಂದ್ರ. ಹೀಗೆ ಇಬ್ಬರೂ ಪ್ರಭಾವಿಗಳು. ಅಷ್ಟೇ ಅಲ್ಲ ರಾಜಕೀಯ ವಿಚಾರದಲ್ಲಿ ಇಬ್ಬರೂ ತಮ್ಮದೇ ನಡೆಯಬೇಕೆನ್ನುವ ಹಠವಾದಿಗಳು. ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿಕೆ ಶಿವಕುಮಾರ್‌ ಅವರಿಗೆ ಯಾರಾದರೂ ಪ್ರಬಲ ಟಕ್ಕರ್‌ ಕೊಡಬಲ್ಲರು ಅಂದ್ರೆ ಅದು ಸತೀಶ್‌ ಜಾರಕಿಹೊಳಿ.

ಅಷ್ಟೇ ಅಲ್ಲ ಸಿದ್ದರಾಮಯ್ಯನವರ ಪರವಾಗಿ ನಿಂತು ಡಿಕೆಶಿ ವಿರುದ್ಧ ಮಾತನಾಡುವ ನಾಯಕ ಅಂದ್ರೆ ಅದು ಸತೀಶ್ ಜಾರಕಿಹೊಳಿ. ಡಿಕೆಶಿ ಹಾಗೂ ಅವರ ಬಣ ಸಿಎಂ ಬದಲಾವಣೆ ಧ್ವನಿ ಎತ್ತಿದಾಗಲೆಲ್ಲ ಸಿದ್ದರಾಮಯ್ಯನವರ ಪರವಾಗಿ ನಿಂತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಧ್ವನಿ ಎತ್ತಿದ್ದೂ ಉಂಟು. ಹೀಗಿರುವಾಗ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಪರಸ್ಪರ ಭೇಟಿ ಮಾಡಿದ್ದು, ಅಬ್ದುಲ್ ಜಬ್ಬಾರ್ ಅವರ ಅಮಾನತು ವಾಪಸ್ ತೆಗೆದುಕೊಳ್ಳುವಂತೆ ಡಿಕೆಶಿಗೆ ಸಲಹೆ ನೀಡಿದ್ದಾರೆ. ಅಲ್ಲದೇ ಈ ಸಂಬಂಧ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿಗೆ ಹೋಗುವುದಾಗಿಯೂ ಪರೋಕ್ಷವಾಗಿ ತಮ್ಮದೇ ಸಂದೇಶವೊಂದನ್ನ ರವಾನಿಸಿದ್ದಾರೆ.

ಸತೀಶ್‌ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್‌ ಭೇಟಿ ಸೌಜನ್ಯಯುತ ಭೇಟಿ ಎಂದು ಬಣ್ಣಿಸಲಾಗಿದೆ. ಆದ್ರೆ, ಇದು ಸೌಜನ್ಯಯುತ ಭೇಟಿ ಅಲ್ಲ ಕಾಂಗ್ರೆಸ್‌ನಲ್ಲಿ ಸದ್ಯ ಭುಗಿಲೆದ್ದಿರುವ ಮುಸ್ಲಿಂ ನಾಯಕರ ಅಸಮಾಧಾನದ ಕುರಿತು ಚರ್ಚೆ ನಡೆಸಿದ್ದಾರೆ. ಅಲ್ಲದೇ ಅಬ್ದುಲ್ ಜಬ್ಬಾರ್ ಅಮಾನತು ಶಿಕ್ಷೆಯನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ಬೆಳವಣಿಗೆಗಳು ಮಾರಕವಾಗಹುದು ಎನ್ನುವುದನ್ನು ಸಹ ಸತೀಶ್ ಜಾರಕಿಹೊಳಿ, ಡಿಕೆಶಿ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ಅಬ್ದುಲ್ ಜಬ್ಬಾರ್ ಅವರನ್ನ ವಾಪಸ್ ಕರೆದುಕೊಳ್ಳಬೇಕೆಂದು ಹೇಳಿದ್ದೇನೆಂದು ಸ್ವತಃ ಸತೀಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಅಲ್ಲದೇ ಮುಂದಿನ ವಾರ ಹೈಕಮಾಂಡ್ ಭೇಟಿ ಮಾಡುವುದಾಗಿಯೂ ಸಹ ಹೇಳಿದ್ದಾರೆ. ಇದರೊಂದಿಗೆ ಸಾಹುಕಾರ, ಮುಸ್ಲಿಂ ನಾಯಕರ ಬೆನ್ನಿಗೆ ನಿಂತಿದ್ದಾರೆ.

ಇನ್ನು ನಿನ್ನೆ (ಏಪ್ರಿಲ್ 16) ನಡೆದ ಸಚಿವ ಸಂಪುಟದಲ್ಲೂ ಸಹ ಮುಸ್ಲಿಂ ನಾಯಕರ ಮೇಲಿನ ಕ್ರಮದ ಬಗ್ಗೆ ಪ್ರಸ್ತಾಪಿಸಿ ಬೇಸರ ಹೊರಹಾಕಿದ್ದಾರೆ. ನಾವು ಮುಸ್ಲಿಂ ಸಮುದಾಯವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಸಿದರೆ, ಅಬ್ದುಲ್ ಜಬ್ಬಾರ್ ಮೇಲೆ ಕ್ರಮ ಕೈಗೊಂಡಿದ್ದು ತೀರಾ ಅವಸರದ ನಿರ್ಧಾರ. ಇದು ಸಮುದಾಯವೇ ನಮಗೆ ಸವಾಲು ಹಾಕುವಂತೆ ಮಾಡಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಪರೋಕವಾಗಿ ಎಚ್ಚರಿಸಿದ್ದಾರೆ.

ಅಬ್ದುಲ್ ಜಬ್ಬಾರ್ ಅವರ ಅಮಾನತು ವಾಪಸ್ ಪಡೆಯಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸತೀಶ್ ಜಾರಕಿಹೊಳಿ ಸಲಹೆ ಕೊಟ್ಟಿದ್ದಾರೆ. ಒಂದು ವೇಳೆ ಸಸ್ಪೆಂಡ್ ವಾಪಸ್ ಪಡೆಯದಿದ್ದರೆ ಜಾರಕಿಹೊಳಿ ಹೈಕಮಾಂಡ್ ನಾಯಕರ ಭೇಟಿಗೂ ಸಿದ್ಧವಾಗಿ ನಿಂತಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಹೇಳಿದ್ದಾರೆ. ಮುಂದಿನ ವಾರ ದೆಹಲಿಗೆ ತೆರಳಿ ಹೈಕಮಾಂಡ್​​ ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದೊಂದಿಗೆ ಜಾರಕಿಹೊಳಿ ಮುಸ್ಲಿಂ ನಾಯಕರ ಬೆನ್ನಿಗೆ ನಿಂತಿರುವುದು ಸ್ಪಷ್ಟವಾಗಿದೆ.

TAGGED:DKSH meeting kept secretSatish Jarkiholi stands behind Muslim leaders
Share This Article
Facebook Twitter Copy Link Print
Previous Article ನಿಮ್ಮ ದಿನವನ್ನು ಧನಾತ್ಮಕವಾಗಿ ಆರಂಭಿಸಲು ಈ ಸಲಹೆಗಳನ್ನು ಪಾಲಿಸಿ
Next Article 15 ಬ್ಯಾಂಕುಗಳಿಂದ ಮಾರ್ಚ್ 31ರವರೆಗೆ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಸರ್ಕಾರದಿಂದ ಅನುಮತಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?