Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ
ಕರ್ನಾಟಕಪ್ರಮುಖ

ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

Share
3 Min Read
SHARE

“ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ.

ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು.

ಇನ್ನು ಉಳಿದಂತೆ ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

ಇನ್ನು ಪ್ರಕರಣದ ಹಿನ್ನಲೆಗಳೇನು?

2016ರ ಜೂನ್ 15ರಂದು ಧಾರವಾಡದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು ಸಪ್ತಾಪುರ ಬಡಾವಣೆಯ ಜಿಮ್​​ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದ ಉಪನಗರ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಯನ್ನು ನಡೆಸಿದ್ದರು. ಈ ಕೊಲೆ ಆಸ್ತಿ ವಿವಾದದ ವಿಚಾರಕ್ಕಾಗಿ ನಡೆದಿದೆ ಎಂದು ಹೇಳಲಾಗಿದೆ.ಆರು ಜನರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದ್ರೆ, ಕೊಲೆಯಾದ ಯೋಗೇಶ್‌ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಬಳಿಕ ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಹೇಳಿತ್ತು. ಅಲ್ಲಿಂದ ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿತ್ತು. ಈ ಕೊಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ಕೈವಾಡವಿರುವ ಅನುಮಾನ ವ್ಯಕ್ತವಾಗಿತ್ತು. 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು, ವಿನಯ್‌ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇದರ ನಂತರ ವಿನಯ್‌ ಕುಲಕರ್ಣಿ ಜಾಮೀನು ಪಡೆದು ಹೊರಗೆ ಬಂದಿದ್ದರು. ನಂತರದಲ್ಲಿ ಈ ಪ್ರಕರಣವನ್ನು ಜನಪ್ರತಿನಿಧಿ ಕೋರ್ಟ್​​ಗೆ ನೀಡಲಾಗಿತ್ತು, ಇದೀಗ ಈ ಅವರಿಗೆ ಶಿಕ್ಷೆಯನ್ನು ಘೋಷಣೆ ಮಾಡಿದೆ.

TAGGED:16 people including MLA Vinay Kulkarni sentenced to life imprisonment
Share This Article
Facebook Twitter Copy Link Print
Previous Article 15 ಬ್ಯಾಂಕುಗಳಿಂದ ಮಾರ್ಚ್ 31ರವರೆಗೆ ಚಿನ್ನ, ಬೆಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರದ ಅನುಮತಿ ಸರ್ಕಾರದಿಂದ ಅನುಮತಿ
Next Article ತನ್ನ ಹಸುವನ್ನೇ ಮಾರಿ ಭ್ರಷ್ಟರ ನಿದ್ರೆ ಗೆಡಿಸಿದ ರೈತ; ಏನಿದು ಭ್ರಷ್ಟಾಚಾರದ ಕಥೆ?

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?