https://youtube.com/shorts/U8nUEfM6Yjc?si=6fq3EiIID4lUG0c4
newsics.com
ನವದೆಹಲಿ: ಪತ್ನಿಯು ತನ್ನ ದೂರಿನಲ್ಲಿ ವರದಕ್ಷಿಣೆ ನೀಡಿರುವುದಾಗಿ ಒಪ್ಪಿಕೊಂಡ ಮಾತ್ರಕ್ಕೆ, ಆಕೆಯ ಅಥವಾ ಆಕೆಯ ಕುಟುಂಬದ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಪೀಡಿತ ಮಹಿಳೆಯರು ಯಾವುದೇ ಭಯವಿಲ್ಲದೆ ದೂರು ದಾಖಲಿಸಲು ಅನುಕೂಲವಾಗುವಂತೆ ಅವರಿಗೆ ಕಾನೂನು ರಕ್ಷಣೆ ನೀಡುವುದು ಅತ್ಯಗತ್ಯ ಎಂದು ನ್ಯಾಯಾಲಯ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಕುರಿತು ಪತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿದೆ. “ನನ್ನ ಪತ್ನಿ ಮತ್ತು ಆಕೆಯ ಕುಟುಂಬದವರು ತಮಗೆ ವರದಕ್ಷಿಣೆ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಆದ್ದರಿಂದ ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಅವರ ವಿರುದ್ಧವೂ ಎಫ್ಐಆರ್ ದಾಖಲಿಸಬೇಕು” ಎಂದು ಪತಿ ಕೋರಿದ್ದರು. ಆದರೆ ನ್ಯಾಯಾಲಯ ಈ ವಾದವನ್ನು ಸಾರಾಸಗಟಾಗಿ ತಿರಸ್ಕರಿಸಿದೆ.
ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 7(3) ಸಂತ್ರಸ್ತರಿಗೆ ಕಾನೂನು ರಕ್ಷಣೆ ನೀಡುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.ದೂರಿನಲ್ಲಿ ವರದಕ್ಷಿಣೆ ನೀಡಿದ ಬಗ್ಗೆ ಉಲ್ಲೇಖವಿದ್ದರೆ, ಅದನ್ನೇ ಆಧಾರವಾಗಿಟ್ಟುಕೊಂಡು ದೂರುದಾರರನ್ನು ಆರೋಪಿಗಳನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.