https://youtube.com/shorts/U8nUEfM6Yjc?si=6fq3EiIID4lUG0c4
newsics.com
ದುಬೈ: ಜಾಗತಿಕ ತೈಲ ಸಾಗಣೆಯ ಪ್ರಮುಖ ಹಾದಿಯಾದ ಹೊರ್ಮುಜ್ ಜಲಸಂಧಿಯಲ್ಲಿ ಸುಮಾರು 20 ಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಹೊತ್ತು ಸಾಗುತ್ತಿದ್ದ ಭಾರತೀಯ ತೈಲ ಟ್ಯಾಂಕರ್ ಅನ್ನು ಗುರಿಯಾಗಿಸಿಕೊಂಡು ಇರಾನ್ ನೌಕಾಪಡೆಯು ಗುಂಡಿನ ದಾಳಿ ನಡೆಸಿದೆ.
ಪಶ್ಚಿಮ ಏಷ್ಯಾದ ಸಮುದ್ರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಭಾರತದ ದೈತ್ಯ ತೈಲ ನೌಕೆಯ ಮೇಲೆ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ದಾಳಿ ಮಾಡಿದೆ ಎಂದು ವರದಿಯಾಗಿದೆ.
ದಾಳಿಯ ಸಮಯದಲ್ಲಿ ನೌಕೆಯಲ್ಲಿದ್ದ ಭಾರತೀಯ ಸಿಬ್ಬಂದಿಗಳ ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದ್ದು, ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯವು ಮಾಹಿತಿ ಕಲೆಹಾಕುತ್ತಿದೆ.
ಈ ಘಟನೆಯಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ, ವಿಶ್ವದ ಪ್ರಮುಖ ತೈಲ ಮಾರ್ಗವಾದ ಹೊರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ದೊಡ್ಡ ಭದ್ರತಾ ಭೀತಿ ಎದುರಾಗಿದೆ.