Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಸಮಯ ನಿಗದಿಗೊಳಿಸಿದ ಜಿಲ್ಲಾಡಳಿತ
ಕರ್ನಾಟಕಪ್ರಮುಖ

ಅಂಜನಾದ್ರಿ ಬೆಟ್ಟಕ್ಕೆ ದರ್ಶನಕ್ಕೆ ಸಮಯ ನಿಗದಿಗೊಳಿಸಿದ ಜಿಲ್ಲಾಡಳಿತ

Share
2 Min Read
SHARE

https://youtube.com/shorts/U8nUEfM6Yjc?si=6fq3EiIID4lUG0c4

newsics.com

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಆಂಜನೇಯನ ಜನ್ಮಸ್ಥಳ ಎಂದೇ ಖ್ಯಾತಿ ಪಡೆದಿರುವ ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ.

ಬೆಟ್ಟ ಏರುವ ಭಕ್ತರು ಬಿಸಿಲಿನ ತಾಪದಿಂದ ಅಸ್ವಸ್ಥರಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕೊಪ್ಪಳ ಜಿಲ್ಲಾಡಳಿತ, ಮಧ್ಯಾಹ್ನದ ವೇಳೆ ಬೆಟ್ಟ ಏರುವುದನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಮತ್ತು ಸಂಜೆ ನಾಲ್ಕು ಗಂಟೆಯ ಬಳಿಕ ಮಾತ್ರ ಭಕ್ತರಿಗೆ ಅಂಜನಾದ್ರಿ ಬೆಟ್ಟ ಏರಲು ಅವಕಾಶ ಕಲ್ಪಿಸಲಾಗಿದೆ.

L. ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಭಕ್ತರು, 575 ಮೆಟ್ಟಿಲುಗಳನ್ನು ಹತ್ತಿ ಹನುಮನ ದರ್ಶನ ಪಡೆಯಬೇಕಿದೆ. ಆದರೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದಾಗಿ ಬೆಟ್ಟ ಏರುವ ಭಕ್ತರಲ್ಲಿ ತೀವ್ರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ನಿರ್ಜಲೀಕರಣ ಮತ್ತು ಸುಸ್ತಿನಿಂದಾಗಿ ಹಲವರು ಮೆಟ್ಟಿಲುಗಳ ಮೇಲೆಯೇ ಕುಸಿದು ಬಿದ್ದಿದ್ದಾರೆ. ಕೆಲ ಭಕ್ತರಿಗೆ ಹೃದಯಾಘಾತವಾಗಿದೆ. ಇಂತಹ ಗಂಭೀರ ಪರಿಸ್ಥಿತಿಯನ್ನು ಪರಿಗಣಿಸಿದ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್, ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಬೆಟ್ಟ ಏರಲು ಸಮಯ ನಿಗದಿ ಮಾಡಿದ್ದಾರೆ. ​ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಭಕ್ತರಿಗೆ ಬೆಟ್ಟ ಏರಲು ಪ್ರವೇಶ ನಿಷೇಧಸಲಾಗಿದೆ.

ಕಳೆದ 2-3 ತಿಂಗಳ ಅವಧಿಯಲ್ಲಿ, ಬೆಟ್ಟ ಏರಿ ದರ್ಶನ ಪಡೆದ ಬಳಿಕ ಉಸಿರಾಟದ ತೊಂದರೆ ಮತ್ತು ಬಿಸಿಲಿನ ತಾಪದಿಂದ ಇಬ್ಬರು ಭಕ್ತರು ಮೃತಪಟ್ಟಿದ್ದಾರೆ. ಮಾರ್ಚ್ ತಿಂಗಳಲ್ಲಿ ಗುಜರಾತ್ ಮೂಲದ ಭಕ್ತನೊಬ್ಬ ಮೆಟ್ಟಿಲು ಏರುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದರೆ, ಏಪ್ರಿಲ್ 1ರಂದು ಮಧ್ಯಾಹ್ನ ವೇಳೆಯಲ್ಲಿ ದಾವಣಗೆರೆ ಮೂಲದ ಮತ್ತೊಬ್ಬ ಭಕ್ತ ಗರ್ಭಗುಡಿಯಲ್ಲಿ ದರ್ಶನ ಪಡೆದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ದುರ್ಘಟನೆಗಳು ಜಿಲ್ಲಾಡಳಿತವನ್ನು ಎಚ್ಚರಿಕೆಗೆ ತಂದಿವೆ.

ಈ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ದರ್ಶನ ಸಮಯದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅದರಂತೆ, ಭಕ್ತರಿಗೆ ಬೆಳಗ್ಗೆ 6 ಗಂಟೆಯಿಂದ 11 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನದ ಉರಿಬಿಸಿಲಿನಲ್ಲಿ ಬೆಟ್ಟ ಏರಲು ಸಂಪೂರ್ಣ ನಿರ್ಬಂಧ ಹೇರಲಾಗಿದೆ.

https://www.newsics.com/2026/04/18/car-catches-fire-in-arabil-driver-burnt-alive-premeditated-murder-plot/

TAGGED:District administration fixes time for darshan at Anjanadri hill
Share This Article
Facebook Twitter Copy Link Print
Previous Article ಅರಬೈಲ್ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಸಜೀವ ದಹನ ,ಪೂರ್ವಯೋಜಿತ ಕೊಲೆ ಸಂಚು
Next Article ತಾಯಂದಿರು, ಸಹೋದರಿಯರೇ ನನ್ನನ್ನು ಕ್ಷಮಿಸಿ : ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ ಸ್ವಾರ್ಥ ರಾಜಕಾರಣವೇ ಕಾರಣ ಎಂದು ಕಿಡಿಕಾರಿದ ಮೋದಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?