https://youtube.com/shorts/RcxcteKkGZ8?si=yxDv0iURLfg799X9
newsics.com
ರಾಜ್ಯದಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಉತ್ತರ ಕರ್ನಾಟಕದ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್ ನೀಡಲಾಗಿದೆ. ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 22 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಂತೆಯೇ ದಕ್ಷಿಣ ಒಳನಾಡಿನಲ್ಲಿಯೂ ಗುಡುಗು ಸಹಿತ ಮಳೆಯೊಂದಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಉಷ್ಣ ಅಲೆ ಇರಲಿದ್ದು, ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಇಲಾಖೆ ತಿಳಿಸಿದೆ.
https://www.newsics.com/2026/04/19/arrival-of-four-south-african-cheetahs-in-bannerghatta/