Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗಳ ಪ್ರಿಯಕರನ ಜತೆ ಸೇರಿ ಅಳಿಯನ ಹ*ತ್ಯೆಗೈದ ತಾಯಿ, ತಮ್ಮ
ಕರ್ನಾಟಕಪ್ರಮುಖ

ಮಗಳ ಪ್ರಿಯಕರನ ಜತೆ ಸೇರಿ ಅಳಿಯನ ಹ*ತ್ಯೆಗೈದ ತಾಯಿ, ತಮ್ಮ

Share
2 Min Read
SHARE

https://youtube.com/shorts/RcxcteKkGZ8?si=yxDv0iURLfg799X9

newsics.com

ಮಗಳ ಪ್ರಿಯಕರನ ಜೊತೆ ಸೇರಿ ಆಕೆಯ ತಾಯಿ ಹಾಗೂ ಸಹೋದರ ಅಳಿಯನನ್ನೇ ಹತ್ಯೆಗೈದ ಘಟನೆ ತುಮಕೂರಿನ ದಂಡೀಪುರದಲ್ಲಿ ನಡೆದಿದೆ.

32 ವರ್ಷದ ನರಸಿಂಹಮೂರ್ತಿ ಕೊಲೆಯಾದ ವ್ಯಕ್ತಿ. ಹೆಂಡತಿ ಸುಜಾತಾಳ ಸಾವಿನ ಬಳಿಕ ಮದ್ಯವ್ಯಸನಿಯಾಗಿದ್ದ ಈತ, ಆಕೆಯ ಪ್ರಿಯಕರ ಆಗಾಗ ಮನೆಗೆ ಬಂದು ಹೋಗುವುದರ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ.

ಇದನ್ನೇ ನೆಪವಾಗಿಸಿಕೊಂಡ ಸುಜಾತಾಳ ತಾಯಿ, ತಮ್ಮ ಹಾಗೂ ಪ್ರಿಯಕರ, ನರಸಿಂಹಮೂರ್ತಿಯನ್ನು ಕೊಲೆಗೈದಿದ್ದಾರೆ ಎಂದು ಮೃತನ ಕುಟುಂಬದವರು ಆರೋಪಿಸಿದ್ದಾರೆ. ಈ ಹಿನ್ನೆಲೆ ಕೊಡಿಗೇನಹಳ್ಳಿ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ನರಸಿಂಹಮೂರ್ತಿ ಸುಜಾತಾಳನ್ನು ಪ್ರೀತಿಸಿ ಕುಟುಂಬದವರ ಒಪ್ಪಿಗೆ ಪಡೆದು ವಿವಾಹವಾಗಿದ್ದ. ಮದುವೆಯ ನಂತರ ಸುಜಾತ ಗಾರ್ಮೆಂಟ್ಸ್ ಉದ್ಯೋಗಕ್ಕೆ ಸೇರಿದ್ದಳು. ಈ ವೇಳೆ ಆಕೆಗೆ ಅಮರ್ ಎಂಬ ಯುವಕ ಪರಿಚಯವಾಗಿದ್ದ. ನಂತರ ಅವರಿಬ್ಬರ ಪರಿಚಯ ಅಕ್ರಮ ಸಂಬಂಧಕ್ಕೆ ತಿರುಗಿತ್ತು. ಇದೇ ಸಮಯದಲ್ಲಿ ಸುಜಾತಾ ಒಂದು ಗಂಡು ಮಗುವಿಗೂ ಜನ್ಮ ಕೊಟ್ಟಿದ್ದಳು. ಆದರೆ ಅನಾರೋಗ್ಯದಿಂದ ಕೆಲವು ತಿಂಗಳ ಹಿಂದೆ ಸುಜಾತ ಸಾವನ್ನಪ್ಪಿದ್ದಳು.

ಪತ್ನಿಯನ್ನು ಕಳೆದುಕೊಂಡ ದುಃಖದಲ್ಲಿ ನರಸಿಂಹಮೂರ್ತಿ ಕುಡಿತದ ದಾಸನಾಗಿದ್ದ. ಮತ್ತೊಂದೆಡೆ ಸುಜಾತಾಳ ಗಂಡು ಮಗು ತನ್ನದೆಂದು ಭಾವಿಸಿದ್ದ ಅಮರ್, ಆಗಾತ ಆಕೆಯ ಮನೆಗೆ ಬಂದು ಹೋಗುತ್ತಿದ್ದ. ಹೀಗೆ ಅಮರ್​ಗೂ ಸುಜತಾಳ ತಾಯಿ ಜಯಮ್ಮ ಹಾಗೂ ಸಹೋದರ ನಂದೀಶ್ಗೂ ಉತ್ತಮ ಸ್ನೇಹ ಬೆಳೆದಿತ್ತು. ಪದೆ ಪದೆ ಅಮರ್ ಮನೆಗೆ ಭೇಟಿ ನೀಡುತ್ತಿದ್ದುದನ್ನು ನರಸಿಂಹಮೂರ್ತಿ ಗಮನಿಸಿದ್ದಲ್ಲದೆ, ಜಯಮ್ಮಳ ಜೊತೆ ಇದೇ ವಿಷಯಕ್ಕೆ ಜಗಳವನ್ನೂ ಆಡಿದ್ದ. ಈ ಜಗಳದ ಬಗ್ಗೆ ಅಮರ್‌ಗೆ ತಿಳಿಸಿದ ಜಯಮ್ಮ, ತನ್ನ ಮಗ ನಂದೀಶ್ ಜೊತೆ ಸೇರಿ ಕೊಲೆ ಸಂಚು ರೂಪಿಸಿದ್ದರೆಂದು ಆರೋಪಿಸಲಾಗಿದೆ.

ಮೂರು ಜನ ರೂಪಿಸಿದ ಸಂಚಿನಂತೆ ನರಸಿಂಹಮೂರ್ತಿಯನ್ನು ಮನೆಗೆ ಕರೆದು ಚಿಕನ್ ಪಾರ್ಟಿ ಹೆಸರಿನಲ್ಲಿ ಮದ್ಯಪಾನ ಮಾಡಿಸಿದ್ದಾರೆ. ಬಳಿಕ ಅಮರ್ ಮತ್ತು ನಂದೀಶ್ ಆತನನ್ನು ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಗ್ಗದಿಂದ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಗ್ರಾಮದ ಸಮೀಪ ರಸ್ತೆಯ ಬಳಿ ಸುಜಾತಾಳ ಫ್ಲೆಕ್​ಸ್ ಇದ್ದ ಜಾಗದಲ್ಲಿಯೇ ಮೃತದೇಹವನ್ನು ಬಿಸಾಡಿದ್ದಾರೆ. ಹೆಂಡತಿಯ ನೆನಪಿನಲ್ಲಿ ಕುಡಿದು ಬಿದ್ದಿದ್ದಾನೆಂಬಂತೆ ಬಿಂಬಿಸಿದ್ದಾರೆ.

ಆದರೆ  ಮೃತದೇಹದ ಕುತ್ತಿಗೆ ಸುತ್ತ ಕಪ್ಪು ಕಲೆ ಮತ್ತು ಎಡಕಿವಿಯಲ್ಲಿ ರಕ್ತ ಬಂದಿರುವುದನ್ನೂ ಗಮನಿಸಿದ ವೈದ್ಯರು ಇದು ಸಹಜ ಸಾವಲ್ಲ, ಕೊಲೆಯೆಂದು ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಮೃತನ ಅಕ್ಕ ಗಾಯತ್ರಿ ಪೊಲೀಸರಿಗೆ ದೂರು ನೀಡಿದ್ದು, ವಶಕ್ಕೆ ಪಡೆದ ಆರೋಪಿಗಳ ವಿಚಾರಣೆ ವೇಳೆ ತಾವು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

https://www.newsics.com/2026/04/19/24-hour-hot-water-supply-to-pilgrims-at-kedarnath-dham-cm-pushkar-singh-dhami/

TAGGED:brothermotherwho killed son-in-law in collusion with daughter's lover
Share This Article
Facebook Twitter Copy Link Print
Previous Article ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು ಪೂರೈಕೆ: ಸಿಎಂ ಪುಷ್ಕರ್ ಸಿಂಗ್ ಧಾಮಿ
Next Article ಇನ್ಮುಂದೆ ಈ 10 ಕೆಲಸಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯ.!

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?