newsics.com
ಬೆಳ್ತಂಗಡಿ(ದಕ್ಷಿಣ ಕನ್ನಡ): ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ.16ರಂದು ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಈ ವಿಷಯವನ್ನು ಬಾಲಕಿ ಮನೆಯವರಿಗೆ ತಿಳಿಸಿದ್ದು, ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17ರಂದು ದೂರು ನೀಡಿದ್ದರು. ಅದರಂತೆ ಪೊಲೀಸರು ಪೋಕ್ಸೋ(POCSO) ಅಡಿ ಪ್ರಕರಣ ದಾಖಲಿಸಿದ್ದರು.
ಬೆಳ್ತಂಗಡಿಯ ಕಡಿರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಎಂಬಿಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸುಮಂತ್ ಎಂಬಾತನಿಗೆ ಮೇ 10ರಂದು ಮದುವೆ ನಿಗದಿಯಾಗಿತ್ತು ಎಂಬ ಮಾಹಿತಿ ದೊರೆತಿದೆ.
ಮೃತನ ಜೊತೆ ಆತನ 1.5 ಕೋಟಿ ಬೆಂಜ್ ಕಾರು ಮಣ್ಣು ಮಾಡಿ ಕಾನೂನು ಸಂಕಷ್ಟಕ್ಕೆ ಸಿಲುಕಿದ ಕುಟುಂಬ
ಕಾವ್ಯಾ ಜತೆ ಫೋನ್‌ನಲ್ಲೇ ಗಿಲ್ಲಿ ನಟ ರೊಮ್ಯಾನ್ಸ್! ಅವ್ರು ಬಿಟ್ಟರೂ ಇವ್ರು ಬಿಡಲ್ಲ ನೋಡಿ!