newsics.com
ಬೆಂಗಳೂರು: ರಾಜ್ಯದ ಬಹುತೇಕ ಕಡೆ ತಾಪಮಾನ ಹೆಚ್ಚಾಗಿದೆ. ಕರಾವಳಿ ಭಾಗದಲ್ಲಿ ಉಷ್ಣ ಅಲೆಯ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಉಷ್ಣ ಅಲೆಯ ಜೊತೆಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು, ಉಳಿದೆಳೆ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆ ಆಗಲಿದೆ. ರಾಜ್ಯದಲ್ಲಿ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
https://www.newsics.com/2026/04/20/iranian-drone-attack-on-us-warships-in-hormuz/