newsics.com
ವಿಜಯಪುರ : ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು.
ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯದಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.
https://www.newsics.com/2026/04/20/heavy-rain-with-wind-yellow-alert-declared-for-14-districts/