newsics.com
ಒಂದು ಕಾಲದಲ್ಲಿ ಅಫ್ಘಾನಿಸ್ತಾನ ದ ಮಾಜಿ ವೇಗಿ ಶಪೂರ್ ಝದ್ರಾನ್ ತಮ್ಮ ಬಿರುಸಿನ ವೇಗದ ಬೌಲಿಂಗ್ ನಿಂದ ಬ್ಯಾಟರ್ಗಳಲ್ಲಿ ಭಯ ಹುಟ್ಟಿಸಿದ್ದರು. ಈಗ ಶಪೂರ್ ಝದ್ರಾನ್ ತಮ್ಮ ಜೀವನದ ಅತ್ಯಂತ ದೊಡ್ಡ ಹೋರಾಟವನ್ನು ಎದುರಿಸುತ್ತಿದ್ದಾರೆ. 38 ವರ್ಷದ ಝದ್ರಾನ್ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಪರಿಣಾಮ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಶಾಪೂರ್ ಝದ್ರಾನ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ‘ಹೆಮೋಫಾಗೋಸೈಟಿಕ್ ಲಿಂಫೋಹಿಸ್ಟಿಯೊಸೈಟೋಸಿಸ್’ (HLH) ಅತ್ಯಂತ ಅಪರೂದ ರೋಗದಿಂದ ಬಳಲುತ್ತಿದ್ದಾರೆ. ಈ ಆರೋಗ್ಯ ಸಮಸ್ಯೆ ಆರಂಭದಲ್ಲೇ ಪತ್ತೆ ಹಚ್ಚಿದರೇ ಗುಣಪಡಿಸುವ ಅಥವಾ ಸುಧಾರಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಸದ್ಯ ಶಾಪೂರ್ ಖಾಯಿಲೆ 4ನೇ ಸ್ಟೇಜ್ ದಾಟಿದೆ. ಹೀಗಾಗಿ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ.
ಜನವರಿ ತಿಂಗಳಲ್ಲಿ ದೆಹಲಿ ಆಸ್ಪತ್ರೆಗೆ ದಾಖಲಾಗಿರುವ ಶಾಪೂರ್ ಸತತ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವರಿ 18 ರಿಂದ ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭಿಕ ಹಂತದಲ್ಲಿ ಶಾಪೂರ್ ನಿಧಾನವಾಗಿ ಚೇತರಿಕೆ ಕಂಡಿದ್ದರು. ಫೆಬ್ರವರಿ ತಿಂಗಳಲ್ಲಿ ಆರೋಗ್ಯ ಸುಧಾರಿಸಿತ್ತು. ಆದರೆ ಸೋಂಕು ಉಲ್ಬಣಿಸಿದ ಕಾರಣ ಶಾಪೂರ್ ಆರೋಗ್ಯ ಮತ್ತೆ ಹದಗೆಟ್ಟಿದೆ. ಈ ಸೋಂಕು ಮೆದುಳಿಗೆ ಹರಡಿದೆ. ಹೀಗಾಗಿ ಶಾಪೂರ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಕಳೆದ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಝದ್ರಾನ್ ನಿವೃತ್ತರಾದರು. ತಮ್ಮ ವೃತ್ತಿಜೀವನದಲ್ಲಿ, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್ ಮತ್ತು ತಿಲಕರತ್ನೆ ದಿಲ್ಶನ್ ಅವರಂತಹ ಪ್ರಮುಖ ಬ್ಯಾಟರ್ಗಳನ್ನು ಔಟ್ ಮಾಡುವ ಮೂಲಕ ಅವರು ತಮ್ಮನ್ನು ತಾವು ಗುರುತಿಸಿಕೊಂಡರು. ಇಡೀ ಕ್ರಿಕೆಟ್ ಜಗತ್ತು ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದೆ.
https://www.newsics.com/2026/04/21/ot-original-choice-haywards-raja-whisky-prices-hiked/