Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮುಸ್ಲಿಂ ಎಂದು ತಪ್ಪಾಗಿ ಭಾವಿಸಿ ಸಿಖ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪಾಪಿ !
ವಿದೇಶ

ಮುಸ್ಲಿಂ ಎಂದು ತಪ್ಪಾಗಿ ಭಾವಿಸಿ ಸಿಖ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪಾಪಿ !

Share
2 Min Read
SHARE

ಯುನೈಟೆಡ್ ಕಿಂಗ್‌ಡಮ್‌ನ ವಾಲ್ಸಾಲ್‌ನಲ್ಲಿ ಸಿಖ್ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿದ್ದ 32 ವರ್ಷದ ವ್ಯಕ್ತಿಯೊಬ್ಬ, ಮಂಗಳವಾರ ಬರ್ಮಿಂಗ್‌ಹ್ಯಾಮ್ ಕ್ರೌನ್ ಕೋರ್ಟ್‌ನಲ್ಲಿ ‘ಧಾರ್ಮಿಕ ಪ್ರೇರಿತ ಅತ್ಯಾಚಾರ’ ಎಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯನ್ನು ಜಾನ್ ಆಶ್ಬಿ  ಎಂದು ಗುರುತಿಸಲಾಗಿದೆ. ಕಳೆದ ಅಕ್ಟೋಬರ್‌ನಲ್ಲಿ ನಡೆದ ಈ ಘಟನೆಯು ವೆಸ್ಟ್ ಮಿಡ್‌ಲ್ಯಾಂಡ್ಸ್ ಸಮುದಾಯದಲ್ಲಿ ತಲ್ಲಣ ಮೂಡಿಸಿತ್ತು. ಆರಂಭದಲ್ಲಿ ಈತ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರೂ, ವಿಚಾರಣೆಯ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

ನಡೆದಿದ್ದೇನು? ನ್ಯಾಯಾಲಯಕ್ಕೆ ಸಲ್ಲಿಕೆಯಾದ ಮಾಹಿತಿಯ ಪ್ರಕಾರ, ಆಶ್ಬಿ ಮಹಿಳೆಯು ಬಸ್ ನಿಲ್ದಾಣದಿಂದ ಮನೆಗೆ ಹೋಗುತ್ತಿದ್ದಾಗ ಅವಳನ್ನು ಹಿಂಬಾಲಿಸಿದ್ದಾನೆ. ನಂತರ ಅವಳ ಮನೆಗೆ ನುಗ್ಗಿ ದಾಳಿ ಮಾಡಿದ್ದಾನೆ. ಸಂತ್ರಸ್ತ ಮಹಿಳೆ ಪೊಲೀಸರಿಗೆ ನೀಡಿದ ವಿಡಿಯೋ ಹೇಳಿಕೆಯಲ್ಲಿ ಹೀಗೆ ತಿಳಿಸಿದ್ದಾರೆ:

“ಅವನ ಕೈಯಲ್ಲಿ ಒಂದು ಮರದ ಕೋಲಿತ್ತು. ನೀನು ಯಾರು ಎಂದು ಕೇಳಿ ನಾನು ಕಿರುಚಲು ಶುರು ಮಾಡಿದೆ. ಅವನು ಲೈಟ್ ಆಫ್ ಮಾಡಿ, ‘ನನಗೆ ನಿನ್ನೊಂದಿಗೆ ಮಜಾ (Fun) ಬೇಕಷ್ಟೆ’ ಎಂದು ಹೇಳಿದ. ಅಷ್ಟೇ ಅಲ್ಲದೆ, ಅವಹೇಳನಕಾರಿ ಪದಗಳಿಂದ ನಿಂದಿಸಿ ನೀನೊಬ್ಬ ‘ಮುಸ್ಲಿಂ’ ಎಂದು ಕೂಗಾಡಿದ. ನಾನು ಮುಸ್ಲಿಂ ಅಲ್ಲ, ಸಿಖ್ ಎಂದು ಹೇಳಿದರೂ ಅವನು ಕೇಳಲಿಲ್ಲ.”

ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ? ಪ್ರಾಸಿಕ್ಯೂಟರ್‌ಗಳು ಡಿಎನ್‌ಎ (DNA) ಸಾಕ್ಷ್ಯಗಳು, ಸ್ಥಳದಲ್ಲಿ ಸಿಕ್ಕಿದ ಫಿಂಗರ್‌ಪ್ರಿಂಟ್‌ಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗುವುದು ಮತ್ತು ದಾರಿಯಲ್ಲಿ ಎರಡು ಅಡಿ ಉದ್ದದ ಮರದ ಕೋಲನ್ನು ಎತ್ತಿಕೊಳ್ಳುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ನಂತರ ಅವಳ ಮೊಬೈಲ್ ಮತ್ತು ಚಿನ್ನಾಭರಣಗಳನ್ನು ದೋಚಿಕೊಂಡು ಈತ ಪರಾರಿಯಾಗಿದ್ದ.

ಸಮುದಾಯದ ಆಕ್ರೋಶ: ವಿಚಾರಣೆಯ ವೇಳೆ ಸಾರ್ವಜನಿಕ ಗ್ಯಾಲರಿಯಲ್ಲಿದ್ದ ಸಿಖ್ ಸಮುದಾಯದ ವ್ಯಕ್ತಿಯೊಬ್ಬರು ಆಕ್ರೋಶ ಹೊರಹಾಕಿದ ನಂತರ, ಆರೋಪಿ ಆಶ್ಬಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

ನ್ಯಾಯಾಧೀಶರ ಎಚ್ಚರಿಕೆ: ಪ್ರಕರಣದ ಗಂಭೀರತೆಯನ್ನು ಗಮನಿಸಿದ ನ್ಯಾಯಾಧೀಶರಾದ ಜಸ್ಟಿಸ್ ಪೆಪ್ಪೆರಲ್ ಅವರು, “ಈ ರೀತಿಯ ಕೃತ್ಯ ಎಸಗುವ ವ್ಯಕ್ತಿ ಅತ್ಯಂತ ಅಪಾಯಕಾರಿ. ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯೇ ಸರಿಯಾದ ಶಿಕ್ಷೆಯಾಗಲಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ,” ಎಂದು ಹೇಳಿದ್ದಾರೆ. ಪ್ರಕರಣದ ಅಂತಿಮ ತೀರ್ಪು ಈ ಶುಕ್ರವಾರ ಹೊರಬೀಳುವ ಸಾಧ್ಯತೆಯಿದೆ.

ಈ ರೀತಿ ಎಣ್ಣೆ ಬಳಸಿದ್ರೆ ಕೂದಲು ಕಪ್ಪಾಗೋದು ಗ್ಯಾರಂಟಿ

TAGGED:Man rapes Sikh womanmistaking her for a Muslim!
Share This Article
Facebook Twitter Copy Link Print
Previous Article ಕೊಡಗಲ್ಲಿ ವಿದೇಶಿ ಮಹಿಳೆಗೆ ಲೈಂ*ಗಿಕ ದೌರ್ಜನ್ಯ:ಹೋಂ ಸ್ಟೇ ಮಾಲೀಕ ಸೇರಿ ಇಬ್ಬರ ಬಂಧನ
Next Article ಬಿಸಿಲಿನಿಂದ ಬೇಗನೆ ಸುಸ್ತಾಗುತ್ತಿದ್ದೀರಾ ? ಈ ಸರಳ ಟಿಪ್ಸ್ ಫಾಲೋ ಮಾಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?