newsics.com
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಮಳೆ, ಕರಾವಳಿಯಲ್ಲಿ ಈಗ ಮಳೆ ಕಡಿಮೆ, ಬಿಸಿಲು ತೀವ್ರ, ಹೀಟ್ ಸ್ಟ್ರೋಕ್ ಎಚ್ಚರಿಕೆ ನೀಡಿದೆ.
ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ವಿಜಯನಗರ, ಹಾವೇರಿ, ದಾವಣಗೆರೆ, ಉತ್ತರ ಕನ್ನಡ, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಚಾಮರಾಜನಗರ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆರ್ಭಟ ಶುರುವಾಗಲಿದ್ದು, ಜನತೆ ಸುರಕ್ಷಿತವಾಗಿರಲು ಸೂಚಿಸಲಾಗಿದೆ. ಬೆಳಗಾವಿ, ಗದಗ, ಹಾವೇರಿ ಸೇರಿದಂತೆ ಮಲೆನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಜಾನೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯಾಗಿದ್ದ ಕಾರಣ ಇವತ್ತು ಇನ್ನು ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿವಸಗಳ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ.