Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನವ ಕರ್ನಾಟಕ ಪಬ್ಲಿಕೇಷನ್ಸ್ ಎಂಡಿ ರಾಜಾರಾಮ್ ನಿಧನ
ಕರ್ನಾಟಕ

ನವ ಕರ್ನಾಟಕ ಪಬ್ಲಿಕೇಷನ್ಸ್ ಎಂಡಿ ರಾಜಾರಾಮ್ ನಿಧನ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಪ್ರಕಾಶನ ಸಂಸ್ಥೆಯಾಗಿರುವ ನವಕರ್ನಾಟಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಆರ್.ಎಸ್. ರಾಜಾರಾಮ್ ಶನಿವಾರ ಬೆಳಗ್ಗೆ ಬೆಂಗಳೂರಿನ ಅಬ್ಬಿಗೆರೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು.

ರಾಜಾರಾಮ್ ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಳೆದ ವಾರ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ವಯೋಸಹಜ ಅಸ್ವಸ್ಥತೆಯ ಹಿನ್ನೆಲೆಯಲ್ಲಿ ರಾಜಾರಾಮ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಒಬ್ಬ ಪುತ್ರ. ಒಬ್ಬ ಪುತ್ರಿ ಇದ್ದಾರೆ.
1941 ಜನವರಿ 30ರಂದು ಮಂಗಳೂರಿನಲ್ಲಿ ಜನಿಸಿದ್ದ ರಾಜಾರಾಮ್, ಮಂಗಳೂರು ಮತ್ತು ಪುತ್ತೂರುಗಳಲ್ಲಿ ವಿದ್ಯಾಭ್ಯಾಸ ಮಾಡಿದರು. ಹೈಸ್ಕೂಲು ಓದುವಾಗಲೇ ಮಾರ್ಕ್ಸ್‌ವಾದಿ ಸಾಹಿತ್ಯದ ಬಗ್ಗೆ ಆಕರ್ಷಣೆ ಹೊಂದಿದ್ದರು.

1960ರಿಂದ ನವಕರ್ನಾಟಕ ಪ್ರಕಾಶನದಲ್ಲಿ ಕೆಲಸಕ್ಕೆ ಸೇರಿ, ತಮ್ಮ ಕ್ರಿಯಾಶೀಲತೆ, ಬದ್ಧತೆಯಿಂದಾಗಿ ಸಂಸ್ಥೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ನವಕರ್ನಾಟಕ ಪ್ರಕಾಶನವನ್ನು ರಾಜ್ಯದಲ್ಲಿ, ಕನ್ನಡ ಓದುಗರ ಮಧ್ಯೆ ವ್ಯಾಪಕವಾಗಿ ಬೆಳೆಸಿದ ಕೀರ್ತಿ ರಾಜಾರಾಮ್ ಅವರಿಗೆ ಸಲ್ಲುತ್ತದೆ.

ಕನ್ನಡ ಸಾಹಿತ್ಯ, ವೈಚಾರಿಕ ಲೋಕಕ್ಕೆ ವಿಭಿನ್ನವಾದ ಕೃತಿಗಳನ್ನು ರಾಜಾರಾಮ್ ಪರಿಚಯಿಸಿದ್ದಾರೆ. ವಿಶ್ವಕಥಾಕೋಶ, ಕರ್ನಾಟಕ ಏಕೀಕರಣ ಇತಿಹಾಸ, ಸ್ವತಂತ್ರ್ಯ ಗಂಗೆಯ ಸಾವಿರ ತೊರೆಗಳು, ಲೋಕಾಯತ, ಜ್ಞಾನ-ವಿಜ್ಞಾನ-ಕೋಶ, ಕರ್ನಾಟಕ ಕಲಾದರ್ಶನ, ಲೋಕ-ಜ್ಞಾನ-ಮಾಲೆ, ಇಗೋ ಕನ್ನಡ, ವಿಶ್ವಮಾನ್ಯರು, ಲೋಕತತ್ವಶಾಸ್ತ್ರ ಪ್ರವೇಶಿಕೆ ಇಂತಹ ಹಲವಾರು ಯೋಜನೆಗಳನ್ನು ರಾಜ್ಯದ, ದೇಶದ ಪ್ರತಿಭಾನ್ವಿತ ಚಿಂತಕರ, ಲೇಖಕರ ಮೂಲಕ ಬರೆಯಿಸಿ, ಪ್ರಕಟಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಥಪೂರ್ಣವಾದ ಕೃತಿಗಳನ್ನು ಕೊಡುವಲ್ಲಿ ರಾಜಾರಾಮ್ ಅವರ ಪಾತ್ರ ದೊಡ್ಡದಾಗಿದೆ.

ಪುಸ್ತಕಗಳ ಮೂಲಕ ಮಾನವಕುಲದ ಸೇವೆ ಎಂಬ ಘೋಷಣೆಯೊಂದಿಗೆ ಕರ್ನಾಟಕದಲ್ಲಿ ವೈಚಾರಿಕ, ಜನಪರ, ಪ್ರಗತಿಪರ ಎಡಪಂಥೀಯ ಸಾಹಿತ್ಯವನ್ನು ನವಕರ್ನಾಟಕ ಪ್ರಕಾಶನ ಹೊರತರುವಲ್ಲಿ ರಾಜಾರಾಮ್ ಅವರ ಪಾತ್ರ ಸ್ಮರಣೀಯವಾದದ್ದು.

ಕರ್ನಾಟಕದಲ್ಲಿ ಪುಸ್ತಕ ಓದುವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಪುಸ್ತಕ ಪ್ರದರ್ಶನ ತಂಡಗಳನ್ನು ಕಟ್ಟಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ ಪುಸ್ತಕ ಪ್ರದರ್ಶನಗಳನ್ನು ಏರ್ಪಡಿಸಿ ರಾಜ್ಯದ ಮೂಲೆ ಮೂಲೆಗೆ ಪ್ರಮುಖ ಲೇಖಕರ ವಿಭಿನ್ನ ವಸ್ತು ವಿಷಯದ ಕೃತಿಗಳು ತಲುಪುವಂತೆ ಮಾಡುವಲ್ಲಿ ಅವರ ಕ್ರಿಯಾಶೀಲತೆ ಕೆಲಸ ಮಾಡಿದೆ.

ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್ಚಂದ್ರ ಗುರು ಇನ್ನಿಲ್ಲ

ಗಗನಯಾತ್ರಿ ಸುನಿತಾ ವಿಲಿಯಮ್ಸ್ ಗೆ ಆರೋಗ್ಯ ಸಮಸ್ಯೆ!

ಸಮುದ್ರಕ್ಕೆ ಹಾರಲು ಯತ್ನಿಸಿದವಳ ಜೀವ ಉಳಿಸಿದ ಕ್ಯಾಬ್ ಚಾಲಕ, ವಿಡಿಯೋ ನೋಡಿ

TAGGED:Nava Karnataka Publications MD Rajaram passed away
Share This Article
Facebook Twitter Copy Link Print
Previous Article ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿಕೆ, ನಾನ್ಯಾಕೆ ರಾಜೀನಾಮೆ ಕೊಡಲಿ- ಸಿಎಂ
Next Article ರಾಜೀನಾಮೆ ನೀಡಲ್ಲ, ಪ್ರಾಸಿಕ್ಯೂಷನ್ ಅನುಮತಿ ಹಿಂದೆ ಷಡ್ಯಂತ್ರ, ಕಾನೂನು ಹೋರಾಟ‌ ಮಾಡುವೆ: ಸಿಎಂ ಸಿದ್ದರಾಮಯ್ಯ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?