https://youtube.com/shorts/7P5j592ICRU?si=brWLJ4hEetaflYiu
newsics.com
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2025-26ನೇ ಸಾಲಿನ ಎಸ್ಎಸ್ಎಲ್ಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಪ್ರಕಟವಾಗಿದ್ದು,ಈ ಬಾರಿ ರಾಜ್ಯಾದ್ಯಂತ ಶೇ. 94.1 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು.
ಈ ವರ್ಷ ರಾಜ್ಯಾದ್ಯಂತ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಬಾರಿ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯು ವಿಶೇಷ ಕ್ರಮಗಳನ್ನು ಕೈಗೊಂಡಿತ್ತು.
ಈ ವೆಬ್‌ನಲ್ಲಿ ಪರೀಕ್ಷಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶವು https://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದೆ. ಜತೆಗೆ karnatakaOne ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪಡೆಯಬಹುದು. ಜತೆಗೆ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಅಥವಾ ಎಸ್ಎಂಎಸ್ ಸಂದೇಶದ ಮೂಲಕವೂ ಫಲಿತಾಂಶ ಲಭಿಸಲಿದೆ.
https://www.newsics.com/2026/04/23/karnataka-sslc-results-announced/