Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Newborn baby dies ಇರುವೆಗಳ ದಾಳಿಗೆ ಐಸಿಯುನಲ್ಲಿದ್ದ ನವಜಾತ ಶಿಶು ಸಾವು: ಪೋಷಕರ ಆರೋಪ
ಕರ್ನಾಟಕಪ್ರಮುಖ

Newborn baby dies ಇರುವೆಗಳ ದಾಳಿಗೆ ಐಸಿಯುನಲ್ಲಿದ್ದ ನವಜಾತ ಶಿಶು ಸಾವು: ಪೋಷಕರ ಆರೋಪ

Share
1 Min Read
SHARE

newsics.com/ನ್ಯೂಸಿಕ್ಸ್

ಮೈಸೂರು: ನಗರದ ಪ್ರತಿಷ್ಠಿತ ಚೆಲುವಾಂಬ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆಗಳು ಕಚ್ಚಿ ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಹಸುಳೆಯ ಸಾವಿಗೆ ಕಾರಣ ಎಂದು ಪೋಷಕರು ಅರೋಪಿಸಿದ್ದಾರೆ.

ಏಪ್ರಿಲ್ 15ರಂದು ಅವಧಿ ಪೂರ್ವ ಅಂದರೆ ಕೇವಲ 7 ತಿಂಗಳಿಗೆ ಮಗು ಜನಿಸಿತ್ತು. ಹುಟ್ಟಿದಾಗ ಮಗು ಕೇವಲ 1 ಕೆಜಿ 40 ಗ್ರಾಂ ತೂಕವಿದ್ದ ಕಾರಣ, ಅದಕ್ಕೆ ವಿಶೇಷ ಚಿಕಿತ್ಸೆ ನೀಡಲು ಐಸಿಯುವಿನಲ್ಲಿ ಇರಿಸಲಾಗಿತ್ತು. ಆದರೆ ಈ  ಐಸಿಯು ವಾರ್ಡ್‌ನಲ್ಲಿ ವಿಪರೀತ ಇರುವೆಗಳಿದ್ದವು. ಈ ಬಗ್ಗೆ ಮೊದಲೇ ವೈದ್ಯರು ಮತ್ತು ಸಿಬ್ಬಂದಿಗೆ ತಿಳಿಸಿದ್ದೆವು. ಆದರೆ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ, ಸಿಹಿಯಾದ ವಸ್ತುಗಳ ಕಾರಣಕ್ಕೆ ಒಂದೆರಡು ಇರುವೆಗಳು ಬಂದಿರಬಹುದು ಎಂದು ಸಮಜಾಯಿಷಿ ನೀಡಿದ್ದರು. ಈಗ ನಮ್ಮ ಮಗುವನ್ನೇ ಕಳೆದುಕೊಂಡಿದ್ದೇವೆ ಎಂದು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.

ಈ ಆರೋಪಗಳನ್ನು ಆಸ್ಪತ್ರೆಯ ಪ್ರಭಾರ ವೈದ್ಯಾಧಿಕಾರಿ ಡಾ. ಲಕ್ಷ್ಮೀಕಾಂತ್ ತಳ್ಳಿಹಾಕಿದ್ದಾರೆ. ಮಗು ಜನಿಸಿದಾಗ ತೀರಾ ಕಡಿಮೆ ತೂಕವಿದ್ದ ಕಾರಣ ಅದರ ಸ್ಥಿತಿ ಗಂಭೀರವಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡುವಾಗ ಮಗು ಅಲುಗಾಡಬಾರದು ಎಂಬ ಕಾರಣಕ್ಕೆ ಕೈ ಮತ್ತು ಬಾಯಿಗೆ ಪ್ಲಾಸ್ಟರ್ ಹಾಕಲಾಗಿತ್ತು. ಆ ಭಾಗದಲ್ಲಿ ಉಂಟಾಗಿರುವ ಗುರುತುಗಳು ಪ್ಲಾಸ್ಟರ್‌ನಿಂದ ಆಗಿರಬಹುದೇ ಹೊರತು ಇರುವೆ ಕಚ್ಚಿದ್ದರಿಂದಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಸಿಬ್ಬಂದಿಯಿಂದ ಯಾವುದೇ ನಿರ್ಲಕ್ಷ್ಯವಾಗಿಲ್ಲ. ಕಳೆದ ಒಂದು ವಾರದಿಂದ ಮಗುವನ್ನು ಉಳಿಸಲು ನಾವು ಹರಸಾಹಸಪಟ್ಟಿದ್ದೇವೆ. ಐಸಿಯುವಿನಲ್ಲಿ ಗ್ಲೂಕೋಸ್ ಇರುವುದರಿಂದ ಅಲ್ಪಸ್ವಲ್ಪ ಇರುವೆಗಳು ಇರಬಹುದು. ಆದರೆ ಅವು ಮಗುವಿನ ಸಾವಿಗೆ ಕಾರಣವಾಗಿಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

War field ಮುಸುಕುಧಾರಿ ಕಮಾಂಡೋಗಳಿಂದ ಭಾರತದತ್ತ ಬರುತ್ತಿದ್ದ 2 ಹಡಗು ವಶ, ವಿಡಿಯೋ ಬಿಡುಗಡೆ ಮಾಡಿದ ಇರಾನ್

Fire Disaster ಬೆಂಗಳೂರಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ‌.ವರೆಗೂ ದಟ್ಟ ಹೊಗೆ! ವಿಡಿಯೋ ನೋಡಿ

ಸಿಕ್ಕ ಸಿಕ್ಕವರಿಂದ ಹೊಡೆತ ತಿಂದು ದಿಕ್ಕಾಪಾಲಾಗಿ ಓಡಿದ BJP ಅಭ್ಯರ್ಥಿ

 

 

TAGGED:Newborn baby in ICU dies after being attacked by ants: Parents allege
Share This Article
Facebook Twitter Copy Link Print
Previous Article War field ಮುಸುಕುಧಾರಿ ಕಮಾಂಡೋಗಳಿಂದ ಭಾರತದತ್ತ ಬರುತ್ತಿದ್ದ 2 ಹಡಗು ವಶ, ವಿಡಿಯೋ ಬಿಡುಗಡೆ ಮಾಡಿದ ಇರಾನ್
Next Article Actor Mohan lal ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡು ಹಾಡಿದ ಮಲಯಾಳಂ ನಟ ಮೋಹನ್‌ಲಾಲ್! ವಿಡಿಯೋ ನೋಡಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?