Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Mohan lal ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡು ಹಾಡಿದ ಮಲಯಾಳಂ ನಟ ಮೋಹನ್‌ಲಾಲ್! ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖಮನರಂಜನೆವೈರಲ್

Actor Mohan lal ಎಂದೆಂದೂ ನಿನ್ನನು ಮರೆತು ಬದುಕಿರಲಾರೆ ಹಾಡು ಹಾಡಿದ ಮಲಯಾಳಂ ನಟ ಮೋಹನ್‌ಲಾಲ್! ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ದೂರದ ಅಮೆರಿಕದಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್​ಲಾಲ್ ಅವರು ಡಾ. ರಾಜ್​ಕುಮಾರ್ (Dr Rajkumar) ಅಭಿನಯದ ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ..’ (Endendu Ninnanu Maretu) ಹಾಡನ್ನು ಹಾಡಿ ಕನ್ನಡಿಗರ ಗಮನ ಸೆಳೆದಿದ್ದಾರೆ.

  1. ಢ

ಈಗ ಅವರು ಅದೇ ಹಾಡನ್ನು ವೇದಿಕೆಯಲ್ಲಿ ಹಾಡಿರುವುದು ಗಮನ ಸೆಳೆದಿದೆ. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಇತ್ತೀಚೆಗೆ ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೋಹನ್​ಲಾಲ್ ಅವರು ಭಾಗಿಯಾಗಿದ್ದಾರೆ. ವೇದಿಕೆಯಲ್ಲಿ ಅವರು ಲೈವ್ ಆಗಿ ಹಾಡು ಹೇಳಿದ್ದಾರೆ. ಡಾ. ರಾಜ್​ಕುಮಾರ್, ಮಂಜುಳಾ ನಟನೆಯ ‘ಎರಡು ಕನಸು’ ಸಿನಿಮಾದ ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ’ ಗೀತೆಯನ್ನು ಅವರು ಹಾಡಿದ್ದಾರೆ. ಅಪ್ಪಟ ಕನ್ನಡಿಗನ ರೀತಿ ಅವರು ಹಾಡು ಹೇಳಿದ್ದಾರೆ.

ಏಪ್ರಿಲ್ 24ರಂದು ಡಾ. ರಾಜ್​ಕುಮಾರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿಯೇ ಮೋಹನ್​ಲಾಲ್ ಅವರ ಈ ವಿಡಿಯೋ ವೈರಲ್ ಆಗಿರುವುದು ವಿಶೇಷ. ಅಣ್ಣಾವ್ರ ಬಗ್ಗೆ ಮೋಹನ್​ಲಾಲ್ ಅವರಿಗೂ ಎಷ್ಟು ಅಭಿಮಾನ ಇದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಆಗಿದೆ. ಇದನ್ನು ನೋಡಿದ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ನಿಜಕ್ಕೂ ಅಚ್ಚರಿ ಆಯಿತು’ ಎಂದು ಅನೇಕರು ಹೇಳಿದ್ದಾರೆ.

ರಾಜನ್-ನಾಗೇಂದ್ರ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ‘ಎಂದೆಂದೂ ನಿನ್ನನು ಮರೆತು..’ ಹಾಡು ಇಂದಿಗೂ ಎವರ್​ಗ್ರೀನ್ ಆಗಿ ಉಳಿದುಕೊಂಡಿದೆ. ಪಿ.ಬಿ. ಶ್ರೀನಿವಾಸ್ ಮತ್ತು ವಾಣಿ ಜಯರಾಮ್ ಅವರು ಈ ಗೀತೆಗೆ ಧ್ವನಿ ನೀಡಿದ್ದರು. 1974ರಲ್ಲಿ ‘ಎರಡು ಕನಸು’ ಸಿನಿಮಾ ಬಿಡುಗಡೆ ಆಗಿತ್ತು. 50 ವರ್ಷ ಕಳೆದರೂ ಈ ಹಾಡು ಹಳೆಯದಾಗಿಲ್ಲ.

ವಿಶೇಷವಾಗಿ ಮೋಹನ್​ಲಾಲ್ ಅವರಿಗೆ ‘ಎಂದೆಂದೂ ನಿನ್ನನು ಮರೆತು..’ ಹಾಡು ಬಹಳ ಇಷ್ಟ. ಈ ಮೊದಲು ಕೂಡ ಅವರ ವಿಡಿಯೋ ವೈರಲ್ ಆಗಿತ್ತು. ಈ ಗೀತೆಯನ್ನು ನೋಡುತ್ತಾ ಅವರು ಎಂಜಾಯ್ ಮಾಡಿದ್ದನ್ನು ಕಂಡು ಡಾ. ರಾಜ್​ಕುಮಾರ್ ಅಭಿಮಾನಿಗಳು ಸಂತಸಪಟ್ಟಿದ್ದರು. ಈ ಬಾರಿಯಂತೂ ಅವರು ಸಾಹಿತ್ಯವನ್ನು ನೋಡದೆಯೇ ಪಕ್ಕಾ ಕನ್ನಡಿಗನಂತೆ ಹಾಡಿದ್ದಾರೆ. ಅವರ ಕಂಠದಲ್ಲಿ ಈ ಗೀತೆಯನ್ನು ಕೇಳಿ ಅಭಿಮಾನಿಗಳು ಫಿದಾ ಆಗಿದ್ದಾರೆ.

Malayalam superstar Mohanlal sings Kannada legend Rajkumar’s hit song Endendu Ninnanu Maretu, at an event in the US recently.#mohanlal #drrajkumar #rajkumar #kfi #kannadacinema pic.twitter.com/rF2FYg0BAN

— Bangalore Times (@BangaloreTimes1) April 23, 2026

 

CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಅಂಟಿಸಿದ ಭದ್ರತಾ ಸಿಬ್ಬಂದಿ

ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭಾರತೀಯರ ವಿಡಿಯೋ ವೈರಲ್!

TAGGED:Malayalam actor Mohanlal sang the kannada song "
Share This Article
Facebook Twitter Copy Link Print
Previous Article Newborn baby dies ಇರುವೆಗಳ ದಾಳಿಗೆ ಐಸಿಯುನಲ್ಲಿದ್ದ ನವಜಾತ ಶಿಶು ಸಾವು: ಪೋಷಕರ ಆರೋಪ
Next Article 9 ಇನ್ಸ್‌ಪೆಕ್ಟರ್ ವರ್ಗಾವಣೆಗೆ ರಾಜ್ಯ ಸರ್ಕಾರದ ಆದೇಶ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?