newsics.com
ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಗದಗದಲ್ಲಿ ನಡೆದಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತಪಟ್ಟವರು.
ಶ್ರಾವಣ ಮಾಸದ ನಿಮಿತ್ತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟಿತ್ತು. ಈ ವೇಳೆ ಕಲ್ಲಾಪೂರ ಕಡೆಗೆ ಹೊರಟಿದ್ದ ಕಾರು ಹಾಗೂ ಇಳಕಲ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಢಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪಿರೈಟ್ ವಿವಾದ: 20 ಲಕ್ಷ ರೂ. ಠೇವಣಿಯಿಡಲು ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಆದೇಶ