newsics.com/ನ್ಯೂಸಿಕ್ಸ್
ಉಡುಪಿ : ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
https://youtube.com/shorts/yrC3ODyMmjo?si=ybubL3Ee_pXg1sLS
ತಡರಾತ್ರಿ ನಡೆದ ಈ ಹೈಡ್ರಾಮಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಹೊಸ ವರ್ಷ ಅಥವಾ ವ್ಯಾಲೆಂಟೈನ್ಸ್ ಡೇ ದಿನಗಳಲ್ಲಿ ಇಂತಹ ದೃಶ್ಯಗಳು ಸಾಮಾನ್ಯವಾಗಿ ಬಿಟ್ಟಿವೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಉಡುಪಿ ಜನ, ಮಣಿಪಾಲದ ಘನತೆಗೆ ಧಕ್ಕೆ ತರುವಂತಹ ಈ ರೀತಿಯ ಅಸಭ್ಯ ವರ್ತನೆಗಳು ಕೂಡಲೇ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ. ಯುವಜೋಡಿಯ ವಿಕೃತಿಯನ್ನು ಸ್ಥಳೀಯರು ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪೊಲೀಸರು ಇಂತಹ ಘಟನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ.
https://www.newsics.com/2026/04/25/recharge-rates-will-become-expensive/