newsics.com/ನ್ಯೂಸಿಕ್ಸ್
ಬೆಂಗಳೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬೆಂಗಳೂರು ನಗರ ಡಿಸಿಗೆ ಪತ್ರ ಬರೆದಿದೆ. ಜನಿವಾರ ತೆಗೆಯದಂತೆ ಸೂಚಿಸಿದ್ದರೂ ಘಟನೆ ನಡೆದಿರುವುದು ಉದ್ದೇಶಪೂರ್ವಕ ಎಂದು KEA ಶಂಕಿಸಿದೆ. ಈ ನಡುವೆ ಆರೋಪ ಸಂಬಂಧ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ..
https://youtube.com/shorts/yrC3ODyMmjo?si=ybubL3Ee_pXg1sLS
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ವಿವಾದ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಹಾಗೂ ಎಫ್‌ಐಆರ್ ಕೂಡ ದಾಖಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಗಳನ್ನು ನಡೆಸುತ್ತಿದೆ. ಗುರುವಾರ ನಡೆದ ಪರೀಕ್ಷೆಗೆ ಹಾಜರಾಗಲು ಬೆಂಗಳೂರಿನ ಖಾಸಗಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ಕೆಲವು ವಿದ್ಯಾರ್ಥಿಗಳಿಗೆ ಅಲ್ಲಿನ ಸಿಬ್ಬಂದಿ ಜನಿವಾರವನ್ನು ತೆಗೆದು ಪರೀಕ್ಷಾ ಕೊಠಡಿಗೆ ಪ್ರವೇಶಿಸುವಂತೆ ತಾಕೀತು ಮಾಡಿದ್ದಾರೆ.
ವಿಷಯ ತಿಳಿದ ತಕ್ಷಣ ಎಚ್ಚೆತ್ತುಕೊಂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಕೃತ್ಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ತನಿಖೆಗೆ ಆದೇಶಿಸಿದೆ. ಪರೀಕ್ಷಾ ನಿಯಮಾವಳಿಗಳಲ್ಲಿ ಇಂತಹ ಯಾವುದೇ ಕಟ್ಟುನಿಟ್ಟಿನ ನಿಯಮವಿಲ್ಲದಿದ್ದರೂ ಸಿಬ್ಬಂದಿ ಅತಿರೇಕವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಘಟನೆಯನ್ನು ಖಂಡಿಸಿ ವಿದ್ಯಾರ್ಥಿಯೊಬ್ಬರ ತಂದೆ ಮಡಿವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
https://www.newsics.com/2026/04/25/a-young-couples-lively-conversation-on-the-road/