Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ : ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!
ಕರ್ನಾಟಕದೇಶಪ್ರಮುಖ

ಚುನಾವಣೆ ನಡೆಸಲು ಹಣವಿಲ್ಲ, ಸಿಬ್ಬಂದಿಯೂ ಇಲ್ಲ : ಸೆಪ್ಟೆಂಬರ್​ವರೆಗೆ ಗಡುವು ಕೋರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ಚುನಾವಣಾ ಆಯೋಗ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ರಾಜಧಾನಿಯ ಆಡಳಿತಾತ್ಮಕ ಬದಲಾವಣೆಯ ನಂತರ ಕುತೂಹಲ ಕೆರಳಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಚುನಾವಣೆಗೆ ಈಗ ಗ್ರಹಣ ಹಿಡಿದಿದೆ. ಜೂನ್ 30ರೊಳಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಅದು ಅಸಾಧ್ಯ ಎಂದು ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ಅಳಲು ತೋಡಿಕೊಂಡಿದೆ.

ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದ ಗಡುವಿನೊಳಗೆ ಚುನಾವಣೆಯನ್ನು ಪೂರ್ಣಗೊಳಿಸಲು ಸಿಬ್ಬಂದಿ ಮತ್ತು ಹಣದ ಕೊರತೆ ಇದೆ ಎಂದು ಆಯೋಗ ತಿಳಿಸಿದೆ. ಇದೇ ವೇಳೆ ಜನಗಣತಿ ಕಾರ್ಯಗಳು ಏಪ್ರಿಲ್ 16ರಿಂದ ಮೇ 15ರವರೆಗೆ ನಡೆಯುತ್ತಿರುವುದರಿಂದ ಕ್ಷೇತ್ರದ ಸಿಬ್ಬಂದಿ ಅದರಲ್ಲಿ ನಿರತರಾಗಿರುತ್ತಾರೆ ಎಂದು ಹೇಳಲಾಗಿದೆ. ಜೊತೆಗೆ, ಮತದಾರರ ಪಟ್ಟಿಯ ವಿಶೇಷ ತಿದ್ದುಪಡಿ (SIR) ಕಾರ್ಯವೂ ನಡೆಯುವ ಸಾಧ್ಯತೆ ಇರುವುದರಿಂದ ಚುನಾವಣಾ ಪ್ರಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಈ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಖ್ಯ ಆಯುಕ್ತರು ಏಪ್ರಿಲ್ 6ರಂದು ಪತ್ರ ಬರೆದು ಚುನಾವಣೆಗೆ ಗಡುವು ವಿಸ್ತರಿಸುವಂತೆ ಕೇಳಿಕೊಂಡಿದ್ದರು. ಬಳಿಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯೂ ಇದೇ ಬೇಡಿಕೆಯನ್ನು ಪುನರಾವರ್ತಿಸಿದೆ. ಆಯೋಗವು ಏಪ್ರಿಲ್ 18ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಚುನಾವಣೆಯನ್ನು ಜೂನ್ 30ರೊಳಗೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದೆ.

ಚುನಾವಣೆ ನಡೆಸಲು ಅಗತ್ಯವಾದ ಸಿಬ್ಬಂದಿ, ಮೂಲಸೌಕರ್ಯ ಹಾಗೂ ಫಂಡ್​ಗಾಗಿ ರಾಜ್ಯ ಸರ್ಕಾರದ ಮೇಲೆಯೇ ಸಂಪೂರ್ಣ ಅವಲಂಬಿತವಾಗಿರುವುದಾಗಿ ಆಯೋಗ ಹೇಳಿದ್ದು, ತಕ್ಷಣ ಹಣ ಬಿಡುಗಡೆ ಮಾಡುವಂತೆ ಸರ್ಕಾರವನ್ನು ಕೇಳಿಕೊಂಡಿದೆ. ಈ ಕುರಿತು ಸೂಕ್ತ ಆದೇಶ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ.

https://www.newsics.com/2026/04/26/your-date-of-birth-reveals-the-secret-to-your-success/

TAGGED:seeking a deadline of September!There is no money or staff to conduct the elections: Election Commission knocks on the door of the Supreme Court
Share This Article
Facebook Twitter Copy Link Print
Previous Article Numerology ಹುಟ್ಟಿದ ದಿನಾಂಕವೇ ತಿಳಿಸುತ್ತೆ ನಿಮ್ಮ ಜೀವನದ ಟರ್ನಿಂಗ್ ಪಾಂಯ್ಟ್!
Next Article ಇನ್ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಕನ್ನಡ ದಿನಪತ್ರಿಕೆ ಓದುವುದು ಕಡ್ಡಾಯ : ಸರ್ಕಾರದ ಮಹತ್ವದ ಆದೇಶ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?