Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶಾದ್ಯಂತ ತೀವ್ರ ಬಿಸಿಗಾಳಿ ಎಚ್ಚರಿಕೆ ನೀಡಿದ ಐಎಂಡಿ
ದೇಶಕರ್ನಾಟಕಪ್ರಮುಖ

ದೇಶಾದ್ಯಂತ ತೀವ್ರ ಬಿಸಿಗಾಳಿ ಎಚ್ಚರಿಕೆ ನೀಡಿದ ಐಎಂಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ದೇಶದ ಮೂರನೇ ಎರಡರಷ್ಟು ಭಾಗ ಸೂರ್ಯನ ಕಡುಕೋಪಕ್ಕೆ ಗುರಿಯಾದಂತಿದೆ. ಹಲವು ರಾಜ್ಯಗಳಲ್ಲಿ ಬಿಸಿಲು ತೀವ್ರತರವಾಗಿದ್ದು, ಜನ-ಜಾನುವಾರು ತತ್ತರಿಸುವಂತಾಗಿದೆ. ಬಿಸಿಗಾಳಿಯು ಉಸಿರಾಡುವ ಗಾಳಿಗೂ ಸಂಚಕಾರ ತಂದೊಡ್ಡಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ ವಾಯವ್ಯ, ಮಧ್ಯ ಭಾರತದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ನಿಂದ 44 ಡಿಗ್ರಿ ಸೆಲ್ಸಿಯಸ್ ನಡುವೆ ಇದೆ. ರಾಜಸ್ಥಾನದ ಶ್ರೀ ಗಂಗಾನಗರದಲ್ಲಿ ಗರಿಷ್ಠ ತಾಪಮಾನ 44.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

 

ಹಲವಾರು ಪ್ರದೇಶಗಳಲ್ಲಿ, ತಾಪಮಾನ ಸಾಮಾನ್ಯಕ್ಕಿಂತ 5 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚಿದೆ. ಮುಂದಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯ ಭಾರತದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖದ ಅಲೆ ವಾತಾವರಣ ಇರುವ ಸಾಧ್ಯತೆಯಿದೆ ಎಂದೂ ಐಎಂಡಿ ಮುನ್ಸೂಚನೆ ನೀಡಿದೆ.

ಜನಜೀವನದ ಮೇಲೆ ತೀವ್ರ ಪರಿಣಾಮ ಬೀರಲಿರುವ ಬೇಸಿಗೆಯ ಬಿಸಿಲನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಹವಾಮಾನ ಇಲಾಖೆಯು ಕೆಲ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಬಿಸಿಗಾಳಿಯ ತೀವ್ರತೆ ಹೆಚ್ಚಾಗಲಿದ್ದು, ಸಾಮಾನ್ಯಕ್ಕಿಂತ ಅಧಿಕವಿರುವ ತಾಪಮಾನದಿಂದ ರಕ್ಷಿಸಿಕೊಳ್ಳಲು ಜನರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅದು ಸೂಚಿಸಿದೆ.

ಮಧ್ಯಾಹ್ನದ ಸಮಯದಲ್ಲಿ ಸೂರ್ಯನ ಬೆಳಕಿಗೆ ಹೆಚ್ಚು ಹೊತ್ತು ಒಡ್ಡಿಕೊಳ್ಳುವುದನ್ನು ತಪ್ಪಿಸಿ.

ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ಗಮನಹರಿಸಿ. ಸಾಕಷ್ಟು ನೀರು ಕುಡಿಯಿರಿ.

ಹಗುರವಾದ ಮತ್ತು ಸಡಿಲ ಇರುವ ಬಟ್ಟೆಗಳನ್ನು ಧರಿಸಿ.

ತಾಪಮಾನ ಹೆಚ್ಚಿರುವ ಸಮಯದಲ್ಲಿ ಕಠಿಣವಾದ ಹೊರಾಂಗಣ ಕೆಲಸಗಳನ್ನು ಮಾಡಬೇಡಿ.

ಮಕ್ಕಳು, ವೃದ್ಧರು ಮತ್ತು ಅನಾರೋಗ್ಯದ ಸಮಸ್ಯೆ ಇರುವವರ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಐಎಂಡಿ ಸಲಹೆ ನೀಡಿದೆ

ಬಿಸಿಲಾಘಾತ ಮತ್ತು ತೀವ್ರ ಸುಸ್ತನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅತ್ಯಗತ್ಯ ಎಂದು ಹವಾಮಾನ ಇಲಾಖೆ ಹೇಳಿದೆ.

https://www.newsics.com/2026/04/26/is-your-phones-storage-full-dont-worry-follow-this-trick/

TAGGED:IMD issues severe heatwave warning across the country
Share This Article
Facebook Twitter Copy Link Print
Previous Article Phone Storage Full ಫೋನ್‌ನಲ್ಲಿ ಸ್ಟೋರೇಜ್‌ ಫುಲ್​ ಆಗಿದ್ಯಾ? ಡೋಂಟ್ ವರಿ :ಈ ಟ್ರಿಕ್ ಫಾಲೋ ಮಾಡಿ
Next Article Gold Rate ವಾರಾಂತ್ಯದಲ್ಲಿ ಚಿನ್ನದ ಬೆಲೆ 140 ರೂ ಇಳಿಕೆ

Popular Posts

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?