newsics.com
ಬೆಂಗಳೂರು: ಆನೇಕಲ್‌ನಲ್ಲಿ ಡೆಂಗ್ಯೂ ರ‍್ಯಾಂಡಮ್ ಟೆಸ್ಟ್ ವೇಳೆ ಆರು ಮಂದಿಗೆ ಝಿಕಾ ಸೋಂಕು ಕಾಣಿಸಿಕೊಂಡಿದೆ.
ಸದ್ಯ ಮನೆಯಲ್ಲಿ ಎಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾರೆ. ಝಿಕಾ ವೈರಸ್ ಪತ್ತೆ ಹಿನ್ನೆಲೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ.
ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.
ಸೊಳ್ಳೆಗಳ ಸಂತಾನೋತ್ಪತ್ತಿ ಆಗದಂತೆ ಕ್ರಮವಹಿಸಲಾಗಿದ್ದು, ಫಾಗಿಂಗ್, ಲಾರ್ವ ನಾಶ ಸೇರಿದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ ರವಿ ಮಾಹಿತಿ ನೀಡಿದ್ದಾರೆ.