newsics.com/ನ್ಯೂಸಿಕ್ಸ್
ದಕ್ಷಿಣ ಸುಡಾನ್ನ ರಾಜಧಾನಿ ಜುಬಾದಲ್ಲಿ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಪರಿಣಾಮ ವಿಮಾನವೊಂದು ನೆಲಕ್ಕೆ ಅಪ್ಪಳಿಸಿದ್ದು, ವಿಮಾನದಲ್ಲಿದ್ದ ಎಲ್ಲಾ 14 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
https://youtube.com/shorts/eOoYZp9a9F0?si=CP6V90gKWCTFTFCS
ದಕ್ಷಿಣ ಸುಡಾನ್ ನಾಗರಿಕ ವಿಮಾನಯಾನ ಪ್ರಾಧಿಕಾರದ ಪ್ರಕಾರ, ದಕ್ಷಿಣ ಸುಡಾನ್ನ ರಾಜಧಾನಿ ಜುಬಾದ ಹೊರವಲಯದಲ್ಲಿ ಸಿಟಿಲಿಂಕ್ ಏವಿಯೇಷನ್ ಸಂಸ್ಥೆಗೆ ಸೇರಿದ ಸೆಸ್ನಾ 208 ಕ್ಯಾರವಾನ್ ವಿಮಾನವು ತಾಂತ್ರಿಕ ಕಾರಣಗಳಿಂದ ಅಪಘಾತಕ್ಕೀಡಾಗಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಪ್ರತಿಕೂಲ ಹವಾಮಾನ ಮತ್ತು ಕಡಿಮೆ ಗೋಚರತೆಯೇ ಈ ಅಪಘಾತಕ್ಕೆ ಪ್ರಮುಖ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ, ವಿಮಾನ ಅಪಘಾತ ನಡೆದ ಸ್ಥಳವು ಬಹುತೇಕ ಮಂಜಿನಿಂದ ಆವೃತವಾಗಿತ್ತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳು ತೋರಿಸಿವೆ. ಪ್ರಸ್ತುತ, ಪ್ರಾಧಿಕಾರವು ತನಿಖಾ ತಂಡವನ್ನು ಸ್ಥಳಕ್ಕೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
https://www.newsics.com/2026/04/28/techie-dies-after-collapsing-while-smiling-and-talking-to-mother/