newsics.com/ನ್ಯೂಸಿಕ್ಸ್
ಗ್ಯಾಂಗ್ಟಕ್ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಸಿಕ್ಕಿಂ ಪ್ರವಾಸದ ವೇಳೆ ಗ್ಯಾಂಗ್ಟಾಕ್‌ನಲ್ಲಿ ಯುವ ಆಟಗಾರರೊಂದಿಗೆ ಫುಟ್ಬಾಲ್ ಆಡಿದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಅವರು, ಸಿಕ್ಕಿಂನ 50ನೇ ರಾಜ್ಯೋತ್ಸವ ದಿನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
https://youtube.com/shorts/eOoYZp9a9F0?si=CP6V90gKWCTFTFCS
ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ‘ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡಿದ್ದು ನಿಜಕ್ಕೂ ಉತ್ತೇಜನಕಾರಿಯಾಗಿತ್ತು’ ಎಂದು ಬರೆದುಕೊಂಡಿದ್ದಾರೆ.
ಸಿಕ್ಕಿಂ ರಾಜ್ಯದ 50ನೇ ಸಂಸ್ಥಾಪನಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಸೋಮವಾರ ಗ್ಯಾಂಗ್ಟಕ್ ತಲುಪಿದ್ದರು.ಕ್ರೀಡೆಯ ಜೊತೆಗೆ, ಅವರು ಗ್ಯಾಂಗ್ಟಕ್‌ನಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ ಗಣ್ಯರೊಂದಿಗೆ ಸಂವಾದ ನಡೆಸಿದರು.
ಎಕ್ಸ್ (X) ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ, ಯುವಕರೊಂದಿಗಿನ ಈ ಫುಟ್‌ಬಾಲ್ ಸೆಷನ್ ಅನ್ನು ಉತ್ತೇಜನಕಾರಿ ಎಂದು ಬಣ್ಣಿಸಿದ್ದಾರೆ.
ಗ್ಯಾಂಗ್ಟಕ್‌ನ ಸುಂದರ ಮುಂಜಾನೆಯಲ್ಲಿ ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡುವುದಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಮೈದಾನದಲ್ಲಿ ತಾವು ಆಡುತ್ತಿರುವ ಕೆಲವು ಚಿತ್ರಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುತ್ತಾ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.