newsics.com
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಬಸ್ ಚಾಲಕರು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಡೆಹ್ರಾಡೂನ್‌ನ ಐಎಸ್‌ಬಿಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್‌ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಒಂದು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಮೂರನೇ ಅತ್ಯಾಚಾರ ಪ್ರಕರಣ ಇದಾಗಿದೆ.
ಮಕ್ಕಳ ಕಲ್ಯಾಣ ಸಮಿತಿ ತಂಡ ಅಪ್ರಾಪ್ತ ಬಾಲಕಿಯನ್ನು ಬಸ್ ನಿಲ್ದಾಣದಿಂದ ರಕ್ಷಿಸಿದ್ದು, ಘಟನೆಯನ್ನು ಬಯಲಿಗೆಳೆದಿದೆ. ಸತತ ಮೂರು ಸಲ ಸಮಾಲೋಚನೆ ನಡೆಸಿದ ಬಳಿಕ ಬಾಲಕಿ ಉತ್ತರ ಪ್ರದೇಶದ ಮೊರಾದಾಬಾದ್ ಮೂಲದವಳು ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೊರಾದಾಬಾದ್‌ನ 16 ವರ್ಷದ ಬಾಲಕಿ ಮೇಲೆ ಆಗಸ್ಟ್ 13 ರ ಸಂಜೆ ಡೆಹ್ರಾಡೂನ್ ISBT ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಬಾಲಕಿ ಪಂಜಾಬ್‌ನಿಂದ ದೆಹಲಿಗೆ ಮತ್ತು ನಂತರ ಡೆಹ್ರಾಡೂನ್‌ಗೆ ಪ್ರಯಾಣ ಬೆಳೆಸಿದ್ದಳು.
ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್ ಆಸೆ ತೋರಿಸಿ ಅತ್ಯಾಚಾರವೆಸಗಿದ ಕಾಮುಕ